ADVERTISEMENT

ಹೊಸ ಕ್ರೆಡಿಟ್‌ ಕಾರ್ಡ್‌ ವಿತರಣೆ: ಎಚ್‌ಡಿಎಫ್‌ಸಿ ಬ್ಯಾಂಕ್‌ಗೆ ಆರ್‌ಬಿಐ ಒಪ್ಪಿಗೆ

ಪಿಟಿಐ
Published 18 ಆಗಸ್ಟ್ 2021, 16:17 IST
Last Updated 18 ಆಗಸ್ಟ್ 2021, 16:17 IST

ಮುಂಬೈ: ಹೊಸದಾಗಿ ಕ್ರೆಡಿಟ್‌ ಕಾರ್ಡ್‌ ವಿತರಣೆ ಮಾಡದಂತೆ ತನ್ನ ಮೇಲೆ ಹೇರಿದ್ದ ನಿರ್ಬಂಧವನ್ನು ಆರ್‌ಬಿಐ ಹಿಂಪಡೆದಿದೆ ಎಂದು ಎಚ್‌ಡಿಎಫ್‌ಸಿ ಬ್ಯಾಂಕ್‌ ಬುಧವಾರ ತಿಳಿಸಿದೆ.

ನಿರ್ಬಂಧದಿಂದಾಗಿ ಕ್ರೆಡಿಟ್‌ ಕಾರ್ಡ್‌ ವಿಭಾಗದಲ್ಲಿ ಕಳೆದುಕೊಂಡಿದ್ದ ಮಾರುಕಟ್ಟೆ ಪಾಲನ್ನು ಶೀಘ್ರವೇ ಮರಳಿ ಪಡೆಯುವ ವಿಶ್ವಾಸವಿದೆ ಎಂದು ಎಚ್‌ಡಿಎಫ್‌ಸಿ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಶಶಿಧರ್‌ ಜಗದೀಶನ್‌ ಹೇಳಿದ್ದಾರೆ. ಬ್ಯಾಂಕ್‌ನ ಸಿಬ್ಬಂದಿಗೆ ಬರೆದಿರುವ ಇ–ಮೇಲ್‌ನಲ್ಲಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.

ಬ್ಯಾಂಕ್‌ನ ಇಂಟರ್‌ನೆಟ್‌/ಮೊಬೈಲ್‌ ಬ್ಯಾಂಕಿಂಗ್‌ ಹಾಗೂ ಪೇಮೆಂಟ್ ಸೇವೆಗಳಲ್ಲಿ ಪದೇ ಪದೇ ತಾಂತ್ರಿಕ ದೋಷಗಳು ಕಂಡುಬಂದಿದ್ದರಿಂದ ಆರ್‌ಬಿಐ ಕಳೆದ ಡಿಸೆಂಬರ್‌ನಲ್ಲಿ ಹೊಸದಾಗಿ ಕ್ರೆಡಿಟ್‌ ಕಾರ್ಡ್‌ ವಿತರಣೆ ಮಾಡುವುದಕ್ಕೆ ತಡೆ ನೀಡಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.