ADVERTISEMENT

ಜುಲೈನಲ್ಲಿ ಶೇ 5.59ಕ್ಕೆ ತಗ್ಗಿದ ಚಿಲ್ಲರೆ ಹಣದುಬ್ಬರ

ಪಿಟಿಐ
Published 12 ಆಗಸ್ಟ್ 2021, 13:26 IST
Last Updated 12 ಆಗಸ್ಟ್ 2021, 13:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಆಹಾರ ಉತ್ಪನ್ನಗಳ ಬೆಲೆ ಇಳಿಕೆ ಆಗಿರುವುದರಿಂದ ಜುಲೈನಲ್ಲಿ ಚಿಲ್ಲರೆ ಹಣದುಬ್ಬರವು ಶೇ 5.59ಕ್ಕೆ ಇಳಿಕೆ ಆಗಿದೆ.

ಗ್ರಾಹಕ ದರ ಸೂಚ್ಯಂಕ (ಸಿಪಿಐ) ಆಧರಿಸಿದ ಚಿಲ್ಲರೆ ಹಣದುಬ್ಬರವು ಜೂನ್‌ನಲ್ಲಿ ಶೇ 6.26ರಷ್ಟು ಇತ್ತು. ಹಿಂದಿನ ವರ್ಷದ ಜುಲೈನಲ್ಲಿಯೂ ಶೇ 6.73ರಷ್ಟು ಗರಿಷ್ಠ ಮಟ್ಟದಲ್ಲಿತ್ತು.

ರಾಷ್ಟ್ರೀಯ ಸಾಂಖ್ಯಿಕ ಕಚೇರಿಯು (ಎನ್‌ಎಸ್‌ಒ) ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ, ಆಹಾರ ಹಣದುಬ್ಬರವು ಜೂನ್‌ನಲ್ಲಿ ಶೇ 5.15ರಷ್ಟು ಇದ್ದಿದ್ದು ಜುಲೈನಲ್ಲಿ ಶೇ 3.96ಕ್ಕೆ ಇಳಿಕೆ ಕಂಡಿದೆ.

ADVERTISEMENT

ಹಣದುಬ್ಬರವನ್ನು ಶೇ 4ರ ಮಟ್ಟದಲ್ಲಿ (ಇದರಲ್ಲಿ ಶೇ 2ರಷ್ಟು ಹೆಚ್ಚು ಅಥವಾ ಶೇ 2ರಷ್ಟು ಕಡಿಮೆ ಆಗಬಹುದು) ಇರಿಸುವ ಗುರಿಯನ್ನುಕೇಂದ್ರ ಸರ್ಕಾರವು ಆರ್‌ಬಿಐಗೆ ನೀಡಿದೆ. 2021–22ನೇ ಹಣಕಾಸು ವರ್ಷದಲ್ಲಿ ಚಿಲ್ಲರೆ ಹಣದುಬ್ಬರವು ಶೇ 5.7ರ ಮಟ್ಟದಲ್ಲಿ ಇರಲಿದೆ ಎಂದು ಆರ್‌ಬಿಐ ತನ್ನ ಈಚಿನ ಹಣಕಾಸು ನೀತಿ ಪರಾಮರ್ಶೆಯಲ್ಲಿ ಅಂದಾಜು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.