ಚಿಲ್ಲರೆ ಹಣದುಬ್ಬರ
ನವದೆಹಲಿ: ಚಿಲ್ಲರೆ ಹಣದುಬ್ಬರ ಪ್ರಮಾಣವು ಜುಲೈನಲ್ಲಿ ಎಂಟು ವರ್ಷಗಳ ಕನಿಷ್ಠ ಮಟ್ಟವಾದ ಶೇಕಡ 1.55ಕ್ಕೆ ಇಳಿಕೆ ಕಂಡಿದೆ.
ತರಕಾರಿ, ಧಾನ್ಯಗಳು ಸೇರಿದಂತೆ ಆಹಾರ ಪದಾರ್ಥಗಳಲ್ಲಿನ ಬೆಲೆಗಳು ಕಡಿಮೆಯಾಗಿರುವುದು ಹಣದುಬ್ಬರ ಇಳಿಕೆಗೆ ಕಾರಣವಾಗಿದೆ.
ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧಾರಿತ ಹಣದುಬ್ಬರ ಪ್ರಮಾಣವು ಜೂನ್ ತಿಂಗಳಲ್ಲಿ ಶೇ 2.1ರಷ್ಟು ಇತ್ತು.
ಇದು ಕಳೆದ ವರ್ಷ ಜುಲೈ ತಿಂಗಳಲ್ಲಿ ಶೇ 3.6ರಷ್ಟು ಇತ್ತು.
2017ರ ಜೂನ್ ತಿಂಗಳಲ್ಲಿ ಹಣದುಬ್ಬರವು ಶೇ 1.46ರಷ್ಟಿತ್ತು. ಅದರ ನಂತರ ಇದೇ ಮೊದಲ ಬಾರಿಗೆ ಕನಿಷ್ಠ ಪ್ರಮಾಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.