ADVERTISEMENT

ಚಿಲ್ಲರೆ ಹಣದುಬ್ಬರ ಶೇ 6.09ಕ್ಕೆ ಏರಿಕೆ

ಪಿಟಿಐ
Published 13 ಜುಲೈ 2020, 18:22 IST
Last Updated 13 ಜುಲೈ 2020, 18:22 IST
ಚಿಲ್ಲರೆ ಹಣದುಬ್ಬರ
ಚಿಲ್ಲರೆ ಹಣದುಬ್ಬರ   

ನವದೆಹಲಿ: ಆಹಾರ ಉತ್ಪನ್ನಗಳ ಬೆಲೆ ಹೆಚ್ಚಾಗಿರುವುದರಿಂದ ಜೂನ್‌ನಲ್ಲಿ ಚಿಲ್ಲರೆ ಹಣದುಬ್ಬರ ಶೇ 6.09ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.

2019ರ ಜೂನ್‌ನಲ್ಲಿ ಚಿಲ್ಲರೆ ಹಣದುಬ್ಬರ ಶೇ 3.18ರಷ್ಟಿತ್ತು.

ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಅಧರಿಸಿದ ಆಹಾರ ಹಣದುಬ್ಬರ ಜೂನ್‌ನಲ್ಲಿ ಶೇ 7.87ರಷ್ಟು ಏರಿಕೆಯಾಗಿದೆ.

ADVERTISEMENT

ಕೋವಿಡ್‌ ನಿಯಂತ್ರಿಸಲು ದೇಶದಲ್ಲಿ ಕೆಲವು ನಿರ್ಬಂಧಗಳನ್ನು ಹೇರಲಾಗಿದೆ. ಹೀಗಾಗಿ ಕೆಲವೇ ಮಾರುಕಟ್ಟೆಗಳಿಂದ ಮಾಹಿತಿ ಸಂಗ್ರಹಿಸಿ ಈ ಅಂಕಿ–ಅಂಶ ನೀಡಲಾಗಿದೆ ಎಂದು ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯವು ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.