ADVERTISEMENT

ಸಣ್ಣ ಹೂಡಿಕೆದಾರರ ಬಗ್ಗೆ ನಿರ್ಮಲಾ ಮೆಚ್ಚುಗೆ

ಪಿಟಿಐ
Published 7 ಜೂನ್ 2022, 11:31 IST
Last Updated 7 ಜೂನ್ 2022, 11:31 IST
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್   

ನವದೆಹಲಿ: ವಿದೇಶಿ ಹೂಡಿಕೆದಾರರು (ಎಫ್‌ಪಿಐ) ಬಂಡವಾಳ ಮಾರುಕಟ್ಟೆಗಳಿಂದ ಹೊರನಡೆಯುತ್ತಿರುವ ಸಂದರ್ಭದಲ್ಲಿ ಸಣ್ಣ ಹೂಡಿಕೆದಾರರು ‘ಶಾಕ್ ಅಬ್ಸಾರ್ಬರ್‌’ಗಳ ರೀತಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕೋವಿಡ್ ಸಾಂಕ್ರಾಮಿಕ ಹರಡಿದ ನಂತರದಲ್ಲಿ ಬಂಡವಾಳ ಮಾರುಕಟ್ಟೆಗಳಲ್ಲಿ ಸಣ್ಣ ಹೂಡಿಕೆದಾರರ ಪಾಲ್ಗೊಳ್ಳುವಿಕೆಯು ಗಮನಾರ್ಹವಾಗಿ ಹೆಚ್ಚಳವಾಗಿದೆ ಎಂದು ನಿರ್ಮಲಾ ಅವರು ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

ತನ್ನ ಮೂಲಕ ತೆರೆಯಲಾಗಿರುವ ಸಕ್ರಿಯ ಡಿಮ್ಯಾಟ್ ಖಾತೆಗಳ ಸಂಖ್ಯೆಯು ಆರು ಕೋಟಿಗೆ ತಲುಪಿದೆ ಎಂದು ಸೆಂಟ್ರಲ್ ಡೆಪಾಸಿಟರಿ ಸರ್ವಿಸಸ್ ಲಿಮಿಟೆಡ್ ಮಾರ್ಚ್‌ ತಿಂಗಳಲ್ಲಿ ಹೇಳಿದೆ. ಈಚಿನ ತಿಂಗಳುಗಳಲ್ಲಿ ಎಫ್‌ಪಿಐಗಳು ದೇಶದ ಷೇರುಪೇಟೆಗಳಲ್ಲಿ ಷೇರುಗಳ ಮಾರಾಟಕ್ಕೆ ಹೆಚ್ಚಿನ ಗಮನ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.