ADVERTISEMENT

ಶೇ 98.26ರಷ್ಟು ನೋಟು ವಾಪಸ್: ಆರ್‌ಬಿಐ

ಪಿಟಿಐ
Published 2 ಜೂನ್ 2025, 15:16 IST
Last Updated 2 ಜೂನ್ 2025, 15:16 IST
₹2,000 ಮುಖಬೆಲೆಯ ನೋಟು
₹2,000 ಮುಖಬೆಲೆಯ ನೋಟು   

ಮುಂಬೈ: ₹2 ಸಾವಿರ ಮುಖಬೆಲೆಯ ಶೇ 98.26ರಷ್ಟು ನೋಟುಗಳು ಬ್ಯಾಂಕಿಂಗ್‌ ವ್ಯವಸ್ಥೆಗೆ ಮರಳಿದೆ. ₹6,181 ಕೋಟಿ ಮೌಲ್ಯದ ನೋಟುಗಳು ಜನರ ಬಳಿ ಈಗಲೂ ಉಳಿದಿವೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಸೋಮವಾರ ತಿಳಿಸಿದೆ.

₹2 ಸಾವಿರ ಮುಖಬೆಲೆಯ ಒಟ್ಟು ₹3.56 ಲಕ್ಷ ಕೋಟಿ ಮೌಲ್ಯದ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ 2023ರ ಮೇ 19ರಂದು ಆರ್‌ಬಿಐ ಘೋಷಿಸಿತ್ತು. ಪ್ರಸಕ್ತ ವರ್ಷದ ಮೇ ತಿಂಗಳಿಗೆ ಎರಡು ವರ್ಷ ಪೂರ್ಣಗೊಂಡಿದೆ.

ಬ್ಯಾಂಕ್‌ಗಳಲ್ಲಿ ಠೇವಣಿ ಇಡುವ ಹಾಗೂ ಬೇರೆ ಮುಖಬೆಲೆಯ ನೋಟುಗಳೊಂದಿಗೆ ಬದಲಾಯಿಸಿಕೊಳ್ಳುವುದಕ್ಕೆ ಬೆಂಗಳೂರು ಸೇರಿ ಆರ್‌ಬಿಐನ 19 ಪ್ರಾದೇಶಿಕ ಕಚೇರಿಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.