ADVERTISEMENT

₹2 ಸಾವಿರ ಮುಖಬೆಲೆಯ ಶೇ 98.15ರಷ್ಟು ನೋಟು ವಾಪಸ್: ಆರ್‌ಬಿಐ

ಪಿಟಿಐ
Published 4 ಫೆಬ್ರುವರಿ 2025, 15:37 IST
Last Updated 4 ಫೆಬ್ರುವರಿ 2025, 15:37 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮುಂಬೈ: ₹2 ಸಾವಿರ ಮುಖಬೆಲೆಯ ಶೇ 98.15ರಷ್ಟು ನೋಟುಗಳು ಬ್ಯಾಂಕಿಂಗ್ ವ್ಯವಸ್ಥೆಗೆ ವಾಪಸ್‌ ಆಗಿವೆ. ಸಾರ್ವಜನಿಕರ ಹತ್ತಿರ ಇನ್ನೂ ₹6,557 ಕೋಟಿ ಮೌಲ್ಯದ ನೋಟು ಉಳಿದುಕೊಂಡಿವೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ ತಿಳಿಸಿದೆ.

ಒಟ್ಟು ₹3.56 ಲಕ್ಷ ಕೋಟಿ ಮೌಲ್ಯದ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ 2023ರ ಮೇ 19ರಂದು ಆರ್‌ಬಿಐ ಘೋಷಿಸಿತ್ತು. 

ಬ್ಯಾಂಕ್‌ಗಳಲ್ಲಿ ಠೇವಣಿ ಇಡುವ ಹಾಗೂ ಬೇರೆ ಮುಖಬೆಲೆಯ ನೋಟುಗಳೊಂದಿಗೆ ಬದಲಾಯಿಸಿಕೊಳ್ಳುವುದಕ್ಕೆ ಬೆಂಗಳೂರು ಸೇರಿ ಆರ್‌ಬಿಐನ 19 ಪ್ರಾದೇಶಿಕ ಕಚೇರಿಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.