ADVERTISEMENT

ಶೇ 98ರಷ್ಟು ನೋಟು ವಾಪಸ್‌: ಆರ್‌ಬಿಐ

ಪಿಟಿಐ
Published 1 ಜನವರಿ 2025, 14:31 IST
Last Updated 1 ಜನವರಿ 2025, 14:31 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮುಂಬೈ: ₹2 ಸಾವಿರ ಮುಖಬೆಲೆಯ ಶೇ 98.12ರಷ್ಟು ನೋಟುಗಳು ಬ್ಯಾಂಕಿಂಗ್‌ ವ್ಯವಸ್ಥೆಗೆ ಮರಳಿದ್ದು, ಜನರ ಬಳಿ ಇನ್ನೂ ₹6,691 ಕೋಟಿ ಮೌಲ್ಯದ ನೋಟುಗಳು ಉಳಿದಿವೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಬುಧವಾರ ತಿಳಿಸಿದೆ.

₹2 ಸಾವಿರ ಮುಖಬೆಲೆಯ ಒಟ್ಟು ₹3.56 ಲಕ್ಷ ಕೋಟಿ ಮೌಲ್ಯದ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ 2023ರ ಮೇ 19ರಂದು ಆರ್‌ಬಿಐ ಘೋಷಿಸಿತ್ತು. 

ಬ್ಯಾಂಕ್‌ಗಳಲ್ಲಿ ಠೇವಣಿ ಇಡುವ ಹಾಗೂ ಬೇರೆ ಮುಖಬೆಲೆಯ ನೋಟುಗಳೊಂದಿಗೆ ಬದಲಾಯಿಸಿಕೊಳ್ಳುವುದಕ್ಕೆ ಬೆಂಗಳೂರು ಸೇರಿ ಆರ್‌ಬಿಐನ 19 ಪ್ರಾದೇಶಿಕ ಕಚೇರಿಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.