ADVERTISEMENT

₹80ರ ಗಡಿ ದಾಟಿದ ರೂಪಾಯಿ ಕುಸಿತ

ಪಿಟಿಐ
Published 20 ಜುಲೈ 2022, 15:45 IST
Last Updated 20 ಜುಲೈ 2022, 15:45 IST
   

ಮುಂಬೈ: ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು ದಿನದ ವಹಿವಾಟಿನ ಅಂತ್ಯಕ್ಕೆ ಇದೇ ಮೊದಲ ಬಾರಿಗೆ ₹ 80ಕ್ಕಿಂತ ಕಡಿಮೆ ಮಟ್ಟಕ್ಕೆ ಕುಸಿದಿದೆ.

ಕೇಂದ್ರ ಸರ್ಕಾರವು ಆಕಸ್ಮಿಕ ಲಾಭ ತೆರಿಗೆಯನ್ನು ಕಡಿತಗೊಳಿಸಿದ್ದರಿಂದ ವಿತ್ತೀಯ ಕೊರತೆಯು ಹೆಚ್ಚಾಗಬಹುದು ಎಂಬ ಕಳವಳ ವ್ಯಕ್ತವಾಗಿದ್ದು ಕೂಡ ರೂಪಾಯಿ ಮೌಲ್ಯ ಕುಸಿತಕ್ಕೆ ಒಂದು ಕಾರಣವಾಯಿತು ಎಂದು ತಜ್ಞರು ಹೇಳಿದ್ದಾರೆ.

ಬುಧವಾರದ ವಹಿವಾಟಿನ ಅಂತ್ಯಕ್ಕೆ ರೂಪಾಯಿ ಮೌಲ್ಯವು ಡಾಲರ್ ಎದುರು ₹ 80.05ಕ್ಕೆ ತಲುಪಿದೆ. ಬುಧವಾರ ರೂಪಾಯಿ 13 ಪೈಸೆಯಷ್ಟು ಮೌಲ್ಯ ಕಳೆದುಕೊಂಡಿದೆ.

ADVERTISEMENT

ರೂಪಾಯಿಯು ಮಂಗಳವಾರ ಮಧ್ಯಂತರ ವಹಿವಾಟಿನಲ್ಲಿ ಒಮ್ಮೆ ₹ 80.05ರ ಮಟ್ಟ ತಲುಪಿತ್ತು. ಆದರೆ ದಿನದ ಕೊನೆಯಲ್ಲಿ ₹ 79.92ಕ್ಕೆ ಬಂದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.