ಮುಂಬೈ: ಕಳೆದ ಎರಡು ದಿನಗಳಲ್ಲಿ ಅಮೆರಿಕದ ಡಾಲರ್ ಎದುರು ಚೇತರಿಕೆ ಕಂಡಿದ್ದ ರೂಪಾಯಿ ಮೌಲ್ಯವು ಗುರುವಾರದ ವಹಿವಾಟಿನಲ್ಲಿ 16 ಪೈಸೆ ಇಳಿಕೆ ಕಂಡಿದೆ.
ಪ್ರತೀ ಡಾಲರ್ ಮೌಲ್ಯ ₹86.56 ಆಗಿದೆ.
ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಮೌಲ್ಯ ಬಲಗೊಂಡಿದೆ. ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆಯಾಗುತ್ತಿದೆ. ದೇಶೀಯ ಮಾರುಕಟ್ಟೆಯಿಂದ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಬಂಡವಾಳ ವಾಪಸ್ ಪಡೆಯುವುದನ್ನು ಮುಂದುವರಿಸಿದ್ದಾರೆ. ಹಾಗಾಗಿ, ರೂಪಾಯಿ ಮತ್ತೆ ಒತ್ತಡಕ್ಕೆ ಸಿಲುಕಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
‘ಆಮದುದಾರರಿಂದ ಡಾಲರ್ ಖರೀದಿ ಪ್ರಮಾಣ ಹೆಚ್ಚಿದೆ. ಇದು ಮುಂದುವರಿದರೆ ರೂಪಾಯಿ ಮತ್ತಷ್ಟು ಒತ್ತಡಕ್ಕೆ ಸಿಲುಕಲಿದೆ’ ಎಂದು ಮಿರೇ ಅಸೆಟ್ ಶೇರ್ಖಾನ್ ಸಂಸ್ಥೆಯ ಸಂಶೋಧನಾ ವಿಶ್ಲೇಷಕ ಅನುಜ್ ಚೌಧರಿ ಹೇಳಿದ್ದಾರೆ.
ಮುಂದಿನ ವಾರ ಡೊನಾಲ್ಡ್ ಟ್ರಂಪ್ ಅವರು ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಜಾಗತಿಕ ಬಿಕ್ಕಟ್ಟುಗಳು ಡಾಲರ್ ಮೌಲ್ಯ ಹಾಗೂ ಕಚ್ಚಾ ತೈಲದ ದರ ಏರಿಕೆ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಮಾರುಕಟ್ಟೆ ವಿಶ್ಲೇಷಕರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.