ADVERTISEMENT

ಸಾರ್ವಕಾಲಿಕ ಕನಿಷ್ಠ ಮಟ್ಟ: 80ರ ಸಮೀಪಕ್ಕೆ ತಲುಪಿದ ರೂಪಾಯಿ ಮೌಲ್ಯ

ಪಿಟಿಐ
Published 5 ಜುಲೈ 2022, 15:48 IST
Last Updated 5 ಜುಲೈ 2022, 15:48 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಮಂಗಳವಾರದ ವಹಿವಾಟಿನಲ್ಲಿ ರೂಪಾಯಿ ಮೌಲ್ಯವು ಅಮೆರಿಕದ ಡಾಲರ್ ಎದುರು 38 ಪೈಸೆ ಕುಸಿದಿದೆ. ರೂಪಾಯಿ ಮೌಲ್ಯವು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 79.33ಕ್ಕೆ ತಲುಪಿದೆ.

ಡಾಲರ್ ಮೌಲ್ಯ ಹೆಚ್ಚಳವಾಗಿದ್ದು ಹಾಗೂ ದೇಶದಿಂದ ವಿದೇಶಿ ಬಂಡವಾಳ ಹೊರಹರಿವು ಅವ್ಯಾಹತವಾಗಿ ನಡೆದಿರುವುದು ರೂಪಾಯಿ ಮೌಲ್ಯ ಕುಸಿತಕ್ಕೆ ಕಾರಣ ಎಂದು ತಜ್ಞರು ಹೇಳಿದ್ದಾರೆ.

ವ್ಯಾಪಾರ ಕೊರತೆ ಅಂತರ ಹೆಚ್ಚಾಗುತ್ತಿರುವುದು, ಅಮೆರಿಕದ ಫೆಡರಲ್ ರಿಸರ್ವ್‌ ಮುಂದಿನ ತಿಂಗಳುಗಳಲ್ಲಿ ಬಡ್ಡಿ ದರವನ್ನು ಇನ್ನಷ್ಟು ಹೆಚ್ಚಿಸುವ ಸಾಧ್ಯತೆ ಇರುವುದು ಕೂಡ ಮೌಲ್ಯ ಕುಸಿತಕ್ಕೆ ಕಾರಣಗಳಾದವು.

ADVERTISEMENT

‘ಕಚ್ಚಾ ತೈಲದ ದರ ಹೆಚ್ಚಾಗುತ್ತಿರುವುದು ಹಾಗೂ ಪ್ರಮುಖ ದೇಶಗಳ ಕೇಂದ್ರೀಯ ಬ್ಯಾಂಕ್‌ಗಳು ಬಡ್ಡಿ ದರ ಜಾಸ್ತಿ ಮಾಡುತ್ತಿರುವುದು ರೂಪಾಯಿ ಮೌಲ್ಯ ಕುಸಿತಕ್ಕೆ ಇಂಬು ಕೊಡುತ್ತಿವೆ’ ಎಂದು ರೆಲಿಗೇರ್ ಬ್ರೋಕಿಂಗ್ ಸಂಸ್ಥೆಯ ಉಪಾಧ್ಯಕ್ಷೆ ಸುಗಂಧಾ ಸಚದೇವ ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ರೂಪಾಯಿ ಮೌಲ್ಯವು ಡಾಲರ್ ಎದುರು ಗರಿಷ್ಠ 81ರ ಮಟ್ಟವನ್ನೂ ತಲುಪಬಹುದು ಎಂದು ಸುಗಂಧಾ ಅವರು ಅಂದಾಜಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.