ADVERTISEMENT

ಕರೆನ್ಸಿ ವಿನಿಮಯ ಮಾರುಕಟ್ಟೆ: 80ರ ಸನಿಹಕ್ಕೆ ರೂಪಾಯಿ

ಪಿಟಿಐ
Published 13 ಜುಲೈ 2022, 16:27 IST
Last Updated 13 ಜುಲೈ 2022, 16:27 IST

ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯವು ಅಮೆರಿಕದ ಡಾಲರ್ ಎದುರು ಬುಧವಾರ 79.81ಕ್ಕೆ ತಲುಪಿದೆ. ದಿನದ ವಹಿವಾಟಿನಲ್ಲಿ ರೂಪಾಯಿಯು 22 ಪೈಸೆಯಷ್ಟು ಮೌಲ್ಯ ಕಳೆದುಕೊಂಡಿದೆ.

ದೇಶದ ಬಂಡವಾಳ ಮಾರುಕಟ್ಟೆಗಳಿಂದ ವಿದೇಶಿ ಬಂಡವಾಳ ಹೊರಹರಿವು ಮುಂದುವರಿದಿದೆ. ವಿದೇಶಿ ಹೂಡಿಕೆದಾರರು ಬುಧವಾರ ₹ 2,839 ಕೋಟಿ ಮೌಲ್ಯದ ಷೇರು ಮಾರಾಟ ಮಾಡಿದ್ದಾರೆ. ಡಾಲರ್ ಮೌಲ್ಯವು 20 ವರ್ಷಗಳ ಗರಿಷ್ಠ ಮಟ್ಟ ತಲುಪಿದೆ.

‘ಕಚ್ಚಾ ತೈಲದ ಬೆಲೆಯು 100 ಡಾಲರ್‌ಗಿಂತ ಕಡಿಮೆಯಾದರೆ ರೂಪಾಯಿಗೆ ಅನುಕೂಲವಾಗಬಹುದು’ ಎಂದು ಎಲ್‌ಕೆಪಿ ಸೆಕ್ಯುರಿಟೀಸ್‌ನ ಸಂಶೋಧನಾ ವಿಶ್ಲೇಷಕ ಜತೀನ್ ತ್ರಿವೇದಿ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.