ADVERTISEMENT

Dollar vs Rupee | ಡಾಲರ್ ಎದುರು ರೂಪಾಯಿ ಮೌಲ್ಯ 25 ಪೈಸೆ ಇಳಿಕೆ

ಪಿಟಿಐ
Published 28 ಜನವರಿ 2025, 13:44 IST
Last Updated 28 ಜನವರಿ 2025, 13:44 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮುಂಬೈ: ಅಮೆರಿಕದ ಡಾಲರ್‌ ಎದುರು ಮಂಗಳವಾರ ನಡೆದ ವಹಿವಾಟಿನಲ್ಲಿ ರೂ‍ಪಾಯಿ ಮತ್ತೆ ಮಂಕಾಯಿತು.

ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯವು 25 ಪೈಸೆ ಕುಸಿದಿದೆ. ಪ್ರತೀ ಡಾಲರ್‌ ಮೌಲ್ಯವು ₹86.56 ಆಗಿದೆ.

ಅಮೆರಿಕದ ಸರಕುಗಳ ಮೇಲೆ ಚೀನಾ, ಭಾರತ ಮತ್ತು ಬ್ರೆಜಿಲ್‌ ಹೆಚ್ಚು ಸುಂಕ ವಿಧಿಸುತ್ತಿವೆ. ಈ ರಾಷ್ಟ್ರಗಳ ಮೇಲೆ ಅತಿಹೆಚ್ಚು ಸುಂಕ ವಿಧಿಸುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಘೋಷಿಸಿದ್ದಾರೆ. ಇದರಿಂದ ರೂಪಾಯಿ ಮೌಲ್ಯ ಕುಸಿತದ ಹಾದಿ ಹಿಡಿದಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ. 

ADVERTISEMENT

ದೇಶೀಯ ಷೇರುಪೇಟೆಯಲ್ಲಿ ವಿದೇಶಿ ಬಂಡವಾಳದ ಹೊರಹರಿವು ಮುಂದುವರಿದಿದೆ. ಇದು ಡಾಲರ್‌ ಮೌಲ್ಯ ಬಲಗೊಳ್ಳಲು ಕಾರಣವಾಗಿದೆ. ಅಲ್ಲದೆ, ತೈಲ ಆಮದುದಾರರಿಂದ ಡಾಲರ್‌ ಖರೀದಿಯಲ್ಲಿ ಏರಿಕೆಯಾಗಿದೆ. ಹಾಗಾಗಿ, ರೂಪಾಯಿ ಒತ್ತಡಕ್ಕೆ ಸಿಲುಕಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.