ಮುಂಬೈ: ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದ್ದ ರೂಪಾಯಿ ಮೌಲ್ಯವು ಬುಧವಾರದ ವಹಿವಾಟಿನಲ್ಲಿ ಅಮೆರಿಕದ ಡಾಲರ್ ಎದುರು 8 ಪೈಸೆ ಇಳಿಕೆಯಾಗಿದೆ. ಪ್ರತೀ ಡಾಲರ್ ಮೌಲ್ಯ ₹86.87 ಆಗಿದೆ.
ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಆರಂಭಿಕ ವಹಿವಾಟಿನಲ್ಲಿ ಏರಿಕೆ ಕಂಡಿದ್ದ ರೂಪಾಯಿ ಮೌಲ್ಯವು, ವಹಿವಾಟಿನ ಅಂತ್ಯದಲ್ಲಿ ಈ ಸ್ಥಿರತೆ ಕಾಯ್ದುಕೊಳ್ಳುವಲ್ಲಿ ವಿಫಲವಾಯಿತು ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
ಕಚ್ಚಾ ತೈಲದ ಬೆಲೆ ಇಳಿಕೆಯು ರೂಪಾಯಿಗೆ ಬಲ ನೀಡಿತ್ತು. ಆದರೆ, ದೇಶೀಯ ಷೇರುಪೇಟೆಯ ಕುಸಿತ ಹಾಗೂ ವಿದೇಶಿ ಬಂಡವಾಳದ ಹೊರಹರಿವಿನ ಪ್ರಮಾಣದ ಹೆಚ್ಚಳದಿಂದಾಗಿ ಇಳಿಕೆ ಕಂಡಿತು ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.