ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಶುಕ್ರವಾರ ನಡೆದ ವಹಿವಾಟಿನಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 20 ಪೈಸೆ ಏರಿಕೆ ಆಗಿದೆ. ಪ್ರತೀ ಡಾಲರ್ ಮೌಲ್ಯ ₹86.92 ಆಗಿದೆ.
ಡಾಲರ್ ಮೌಲ್ಯ ಮತ್ತು ಕಚ್ಚಾ ತೈಲದ ಬೆಲೆ ಇಳಿಕೆಯು ರೂಪಾಯಿ ಬಲವರ್ಧನೆಗೆ ನೆರವಾಯಿತು ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ಸೆನ್ಸೆಕ್ಸ್, ನಿಫ್ಟಿ ಇಳಿಕೆ: ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 8 ಅಂಶ ಇಳಿಕೆಯಾಗಿ, 74,332ಕ್ಕೆ ಅಂತ್ಯಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ನಿಫ್ಟಿ) 8 ಅಂಶ ಏರಿಕೆಯಾಗಿ 22,552 ಅಂಶಗಳಲ್ಲಿ ವಹಿವಾಟು ಕೊನೆಗೊಂಡಿದೆ.
ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್‌ಐಐ) ಗುರುವಾರದ ವಹಿವಾಟಿನಲ್ಲಿ ₹2,337 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.