ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಶುಕ್ರವಾರ ನಡೆದ ವಹಿವಾಟಿನಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 12 ಪೈಸೆ ಏರಿಕೆಯಾಗಿದೆ. ವಹಿವಾಟಿನ ಅಂತ್ಯಕ್ಕೆ ಪ್ರತೀ ಡಾಲರ್ ಮೌಲ್ಯವು ₹86.81 ಆಗಿದೆ.
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಏಪ್ರಿಲ್ 1ರಿಂದ ಸುಂಕ ಹೇರಿಕೆ ನೀತಿ ಜಾರಿಗೊಳಿಸುವುದಾಗಿ ಹೇಳಿದ್ದಾರೆ. ಇದರಿಂದ ಡಾಲರ್ ಮೌಲ್ಯ ಏರಿಕೆಯಾಗಿದ್ದು, ರೂಪಾಯಿ ಮೌಲ್ಯ ಇಳಿಕೆಯಾಗಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.