ADVERTISEMENT

ಕರೆನ್ಸಿ ವಿನಿಮಯ: ರೂ‍ಪಾಯಿ ಮೌಲ್ಯ 22 ಪೈಸೆ ಏರಿಕೆ

​ಪ್ರಜಾವಾಣಿ ವಾರ್ತೆ
Published 24 ಜನವರಿ 2025, 16:19 IST
Last Updated 24 ಜನವರಿ 2025, 16:19 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಶುಕ್ರವಾರ ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯವು 22 ಪೈಸೆ ಏರಿಕೆಯಾಗಿದೆ. ಪ್ರತೀ ಡಾಲರ್‌ ಮೌಲ್ಯ ₹86.22 ಆಗಿದೆ. 

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದೆ. ಅಲ್ಲದೆ, ದೇಶದ ಈಕ್ವಿಟಿ ಮಾರುಕಟ್ಟೆಯಲ್ಲಿ ವಿದೇಶಿ ಬಂಡವಾಳ ಹೊರಹರಿವಿನ ಪ್ರಮಾಣವು ಅಲ್ಪಮಟ್ಟಿಗೆ ಕಡಿಮೆಯಾಗಿದೆ. ಇದು ರೂಪಾಯಿ ಬಲಗೊಳ್ಳಲು ನೆರವಾಗಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

ಆದರೆ, ದೇಶೀಯ ಷೇರುಪೇಟೆ ಮತ್ತು ರೂ‍ಪಾಯಿ ಮೌಲ್ಯವು ಸ್ಥಿರತೆ ಕಾಯ್ದುಕೊಳ್ಳುವಲ್ಲಿ ಫೆಬ್ರುವರಿ 1ರಂದು ಮಂಡಿಸಲಿರುವ ಕೇಂದ್ರ ಬಜೆಟ್ ನಿರ್ಣಾಯಕವಾಗಿದೆ ಎಂದು ಹೇಳಿದ್ದಾರೆ.

ADVERTISEMENT

‘ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಘೋಷಿಸಿದ ನೀತಿಗಳಿಂದ ಇತ್ತೀಚೆಗೆ ಡಾಲರ್‌ ಸೂಚ್ಯಂಕ ದಾಖಲೆ ಮಟ್ಟಕ್ಕೆ ತಲುಪಿತ್ತು. ಆದರೆ, ಜಾಗತಿಕ ಅನಿಶ್ಚಿತತೆಗಳಿಂದಾಗಿ ಸ್ಥಿರತೆ ಕಾಯ್ದುಕೊಳ್ಳುವಲ್ಲಿ ವಿಫಲವಾಗಿದೆ’ ಎಂದು ಸಿಆರ್‌ ಫೊರೆಕ್ಸ್‌ ಅಡ್ವೈಸರ್‌ನ ವ್ಯವಸ್ಥಾಪಕ ನಿರ್ದೇಶಕ ಅಮಿತ್ ಪಬಾರಿ ತಿಳಿಸಿದ್ದಾರೆ.

ದಾವೋಸ್‌ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆಯಲ್ಲಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಶೀಘ್ರವೇ ಅಮೆರಿಕದ ಫೆಡರಲ್ ರಿಸರ್ವ್‌ ಬ್ಯಾಂಕ್‌ ಬಡ್ಡಿದರ ಕಡಿತಗೊಳಿಸಲಿದೆ ಎಂದು ಪ್ರಕಟಿಸಿದ್ದಾರೆ. ಇದು ಡಾಲರ್‌ ಸೂಚ್ಯಂಕದ ಇಳಿಕೆಗೆ ಕಾರಣವಾಗಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.