ADVERTISEMENT

Indian Rupee: ರೂಪಾಯಿ ಮೌಲ್ಯ 33 ಪೈಸೆ ಏರಿಕೆ

ಪಿಟಿಐ
Published 21 ಏಪ್ರಿಲ್ 2025, 13:45 IST
Last Updated 21 ಏಪ್ರಿಲ್ 2025, 13:45 IST
ರೂಪಾಯಿ
ರೂಪಾಯಿ   

ಮುಂಬೈ: ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯವು ಸೋಮವಾರದ ವಹಿವಾಟಿನಲ್ಲಿ 33 ಪೈಸೆ ಏರಿಕೆಯಾಗಿದೆ. ಪ್ರತೀ ಡಾಲರ್‌ ಮೌಲ್ಯ ₹85.05 ಆಗಿದೆ.

ದೇಶೀಯ ಷೇರುಸೂಚ್ಯಂಕಗಳ ಏರಿಕೆ ಮತ್ತು ವಿದೇಶಿ ಬಂಡವಾಳದ ಒಳಹರಿವು ಹೂಡಿಕೆದಾರರಿಗೆ ಉತ್ತೇಜನ ನೀಡಿದೆ. ಇದು ರೂಪಾಯಿ ಮೌಲ್ಯ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.

ಗುರುವಾರದ ವಹಿವಾಟಿನಲ್ಲಿ ರೂಪಾಯಿ ಮೌಲ್ಯ 26 ಪೈಸೆ ಏರಿಕೆಯಾಗಿದ್ದು, ಪ್ರತೀ ಡಾಲರ್‌ ₹85.38 ಆಗಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.