ADVERTISEMENT

ಡಾಲರ್‌ ಎದುರು ರೂಪಾಯಿ ಮೌಲ್ಯ 5 ಪೈಸೆ ಏರಿಕೆ

ಪಿಟಿಐ
Published 17 ಜುಲೈ 2020, 6:58 IST
Last Updated 17 ಜುಲೈ 2020, 6:58 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಶುಕ್ರವಾರದಿನದ ಆರಂಭಿಕ ವಹಿವಾಟಿನಲ್ಲಿ ಅಮೆರಿಕನ್‌ ಡಾಲರ್‌ ಎದುರು 7 ಪೈಸೆ ಇಳಿಕೆ ಕಂಡಿದ್ದ ರೂಪಾಯಿ ಮೌಲ್ಯ ನಂತರ 5 ಪೈಸೆ ಚೇತರಿಕೆ ಕಂಡು 75.13ಕ್ಕೆ ವಿನಿಮಯಗೊಂಡಿದೆ.

ಗುರುವಾರ ಡಾಲರ್‌ ಎದುರು ರೂಪಾಯಿ ಮೌಲ್ಯ 75.18 ರಷ್ಟಿತ್ತು. ಇತರೆ ಕರೆನ್ಸಿಗಳ ಎದುರು ಡಾಲರ್‌ ಮೌಲ್ಯ 0.09ರಷ್ಟು ಕುಸಿದು96.25ರಂತೆ ವಿನಿಮಯಗೊಂಡಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್‌ ಕಚ್ಚಾ ತೈಲ ದರ ಶೇ 0.21ರಷ್ಟು ಇಳಿಕೆಯಾಗಿ ಒಂದು ಬ್ಯಾರೆಲ್‌ಗೆ 43.28 ಡಾಲರ್‌ಗೆ ಮಾರಾಟವಾಯಿತು.

ADVERTISEMENT

ಜಾಗತಿಕ ಷೇರುಪೇಟೆಗಳ ವಹಿವಾಟು ಮತ್ತು ಕೋವಿಡ್‌ ಪ್ರಕರಣಗಳು ದೇಶಿ ಷೇರುಪೇಟೆಯ ಮೇಲೆ ಪರಿಣಾಮ ಬೀರುತ್ತಿವೆ.

ಸದ್ಯ ವಿಶ್ವದಾದ್ಯಂತ ಕೋವಿಡ್‌ ಸೋಂಕಿತರ ಸಂಖ್ಯೆ 1.37 ಕೋಟಿ ದಾಟಿದ್ದು, ಸಾವಿನ ಸಂಖ್ಯೆ 5.89 ಲಕ್ಷ ಮುಟ್ಟಿದೆ. ಇತ್ತ ಭಾರತದಲ್ಲಿ ಸೋಂಕಿತರ ಸಂಖ್ಯೆ 10,03,832 ಕ್ಕೆ ಏರಿಕೆಯಾಗಿದ್ದು, 25,602 ಮಂದಿ ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.