ADVERTISEMENT

ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಏರಿಕೆ

ಪಿಟಿಐ
Published 20 ಅಕ್ಟೋಬರ್ 2025, 13:37 IST
Last Updated 20 ಅಕ್ಟೋಬರ್ 2025, 13:37 IST
<div class="paragraphs"><p>ರೂಪಾಯಿ</p></div>

ರೂಪಾಯಿ

   

ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಸೋಮವಾರ ನಡೆದ ವಹಿವಾಟಿನಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 9 ಪೈಸೆ ಏರಿಕೆ ಕಂಡಿದೆ. ಡಾಲರ್ ಎದುರು ರೂಪಾಯಿಯ ಮೌಲ್ಯವು ₹87.93 ಆಗಿದೆ.

ವಿದೇಶಿ ಬಂಡವಾಳದ ಒಳಹರಿವು, ಕಚ್ಚಾ ತೈಲ ಬೆಲೆ ಇಳಿಕೆ ಮತ್ತು ದೇಶಿ ಷೇರುಪೇಟೆ ಸೂಚ್ಯಂಕಗಳ ಏರಿಕೆಯಿಂದ ರೂಪಾಯಿ ಮೌಲ್ಯವು ಹೆಚ್ಚಳವಾಗಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.  ಶುಕ್ರವಾರದ ವಹಿವಾಟಿನಲ್ಲಿ ರೂಪಾಯಿ ಮೌಲ್ಯ ₹88.02 ಆಗಿತ್ತು. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.