ರೂಪಾಯಿ
ಸಾಂಕೇತಿಕ ಚಿತ್ರ
ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಬುಧವಾರ ನಡೆದ ವಹಿವಾಟಿನಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 19 ಪೈಸೆ ಏರಿಕೆಯಾಗಿದೆ. ಪ್ರತೀ ಡಾಲರ್ ಮೌಲ್ಯ ₹87 ಆಗಿದೆ.
ಸತತವಾಗಿ ಕುಸಿತದ ಹಾದಿಯಲ್ಲಿದ್ದ ದೇಶೀಯ ಷೇರುಪೇಟೆ ಚೇತರಿಕೆ ಕಂಡಿದೆ. ಮತ್ತೊಂದೆಡೆ ಕಚ್ಚಾ ತೈಲದ ಬೆಲೆಯಲ್ಲಿ ಇಳಿಕೆಯಾಗಿರುವುದು ರೂಪಾಯಿ ಬಲವರ್ಧನೆಗೆ ಕಾರಣವಾಗಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
ಡೊನಾಲ್ಡ್ ಟ್ರಂಪ್ ಅವರ ಸುಂಕ ನೀತಿಗೆ ಕೆನಡಾ, ಮೆಕ್ಸಿಕೊ, ಚೀನಾ ತಿರುಗೇಟು ನೀಡಿವೆ. ಈ ಬೆಳವಣಿಗೆಯು ಡಾಲರ್ ಮೌಲ್ಯದ ಮೇಲೆ ಪರಿಣಾಮ ಬೀರಿದೆ ಎಂದು ತಿಳಿಸಿದ್ದಾರೆ.
ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆಯಲ್ಲಿ ಶೇ 0.75ರಷ್ಟು ಇಳಿಕೆಯಾಗಿದ್ದು, ಪ್ರತಿ ಬ್ಯಾರೆಲ್ 70.51 ಡಾಲರ್ ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.