ADVERTISEMENT

ಮಂಕಾದ ರೂಪಾಯಿ

ಪಿಟಿಐ
Published 8 ಏಪ್ರಿಲ್ 2025, 14:16 IST
Last Updated 8 ಏಪ್ರಿಲ್ 2025, 14:16 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಮಂಗಳವಾರ ನಡೆದ ವಹಿವಾಟಿನಲ್ಲಿ ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ ಮಂಕಾಯಿತು. 

ರೂಪಾಯಿ ಮೌಲ್ಯ 50 ಪೈಸೆ ಇಳಿಕೆ ಕಂಡಿದೆ. ಕಳೆದ ಮೂರು ತಿಂಗಳ ಅವಧಿಯಲ್ಲಿ ಅತಿಹೆಚ್ಚು ನಷ್ಟ ಕಂಡ ದಿನ ಇದಾಗಿದೆ. ಪ್ರತೀ ಡಾಲರ್‌ ಮೌಲ್ಯ ₹86.26 ಆಗಿದೆ. 

ಟ್ರಂಪ್‌ ಸುಂಕ ನೀತಿಯಿಂದ ಜಾಗತಿಕ ವ್ಯಾಪಾರ ಸಮರ ಸೃಷ್ಟಿಯಾಗಲಿದೆ. ಇದು ಆರ್ಥಿಕ ಬೆಳವಣಿಗೆಗೆ ಪೆಟ್ಟು ನೀಡುವ ಆತಂಕವಿದೆ. ಹಾಗಾಗಿ, ರೂಪಾಯಿ ಮೌಲ್ಯ ಇಳಿಕೆಯಾಗಿದೆ ಎಂದು ತಜ್ಞರು ತಿಳಿಸಿದ್ದಾರೆ.

ADVERTISEMENT

ಅಲ್ಲದೆ, ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆಯಾಗಿದೆ. ಮತ್ತೊಂದೆಡೆ ದೇಶದ ಷೇರುಪೇಟೆಯಿಂದ ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಬಂಡವಾಳ ಹಿಂಪಡೆಯುವುದು ಮುಂದುವರಿದಿರುವುದು ರೂಪಾಯಿ ಬಲಗೊಳ್ಳಲು ತೊಡಕಾಗಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.