ADVERTISEMENT

17 ತಿಂಗಳ ಕನಿಷ್ಠ ಮಟ್ಟಕ್ಕೆ ರೂಪಾಯಿ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2020, 19:40 IST
Last Updated 12 ಮಾರ್ಚ್ 2020, 19:40 IST
ಪಿಟಿಐ
ಪಿಟಿಐ   

ಮುಂಬೈ: ಇಲ್ಲಿಯ ಕರೆನ್ಸಿ ವಿನಿಮಯ ಮಾರುಕಟ್ಟೆಯ ಗುರುವಾರದ ವಹಿವಾಟಿನಲ್ಲಿ ಡಾಲರ್‌ ಎದುರು ರೂಪಾಯಿ ದರ 60 ಪೈಸೆಗಳಷ್ಟು ಕುಸಿತ ಕಂಡು ₹ 74.28ಕ್ಕೆ ಇಳಿಯಿತು.

ಅಮೆರಿಕದ ಡಾಲರ್‌ ಎದುರಿನ ರೂಪಾಯಿ ಬೆಲೆ ಈಗ 17 ತಿಂಗಳ ಕನಿಷ್ಠ ಮಟ್ಟಕ್ಕೆ ತಲುಪಿದೆ. ‘ಕೊರೊನಾ–2’ ವೈರಸ್‌ನಿಂದ ಉದ್ಭವಿಸಿರುವ ಆರ್ಥಿಕ ಬಿಕ್ಕಟ್ಟು ಜಾಗತಿಕ ಹಿಂಜರಿತಕ್ಕೆ ಕಾರಣವಾಗಲಿದೆ ಎನ್ನುವ ಆತಂಕ ಹೂಡಿಕೆದಾರರಲ್ಲಿ ಮನೆ ಮಾಡಿದೆ. ಹೀಗಾಗಿ ಡಾಲರ್‌ ಖರೀದಿಗೆ ಮುಗಿ ಬಿದ್ದಿದ್ದಾರೆ.

ಬೇಡಿಕೆ ಹೆಚ್ಚಳದ ಹಿನ್ನೆಲೆಯಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌, ಡಾಲರ್‌ ಲಭ್ಯತೆ ಹೆಚ್ಚಿಸಿ ರೂಪಾಯಿ ಮೇಲಿನ ಒತ್ತಡ ತಗ್ಗಿಸಲು ಪ್ರಯತ್ನಿಸಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.