ADVERTISEMENT

11 ಪೈಸೆ ಇಳಿಕೆ ಕಂಡು 78ರ ಗಡಿ ದಾಟಿದ ರೂಪಾಯಿ

ಪಿಟಿಐ
Published 13 ಜೂನ್ 2022, 16:05 IST
Last Updated 13 ಜೂನ್ 2022, 16:05 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು ಇದೇ ಮೊದಲ ಬಾರಿಗೆ ₹ 78ರ ಗಡಿ ದಾಟಿ, ಸಾರ್ವಕಾಲಿಕ ಕನಿಷ್ಠ ಮಟ್ಟವನ್ನು ತಲುಪಿತು. ಸೋಮವಾರದ ವಹಿವಾಟಿನಲ್ಲಿ 11 ಪೈಸೆ ಇಳಿಕೆ ಕಂಡಿತು.

ಜಾಗತಿಕ ಷೇರುಪೇಟೆಗಳಲ್ಲಿನ ಕುಸಿತ ಮತ್ತು ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್‌ ಮೌಲ್ಯ ವೃದ್ಧಿ ಆಗಿರುವ ಕಾರಣಗಳಿಂದ ರೂಪಾಯಿ ಮೌಲ್ಯ ಇಳಿಕೆ ಆಗಿದೆ.

ಆರ್‌ಬಿಐನ ಮಧ್ಯಪ್ರವೇಶದ ಪರಿಣಾಮವಾಗಿ ರೂಪಾಯಿ ಮೌಲ್ಯವು ಇನ್ನಷ್ಟು ಕುಸಿತ ಕಾಣುವುದಕ್ಕೆ ತಡೆ ಬಿದ್ದಿದೆ ಎಂದು ರಿಲಯನ್ಸ್ ಸೆಕ್ಯುರಿಟೀಸ್‌ನ ಹಿರಿಯ ಸಂಶೋಧನಾ ವಿಶ್ಲೇಷಕ ಶ್ರೀರಾಮ್‌ ಅಯ್ಯರ್‌ ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.