ADVERTISEMENT

ಡಾಲರ್‌ ಎದುರು ರೂಪಾಯಿ ಮೌಲ್ಯ 11 ಪೈಸೆ ಇಳಿಕೆ

ಪಿಟಿಐ
Published 23 ಅಕ್ಟೋಬರ್ 2020, 5:49 IST
Last Updated 23 ಅಕ್ಟೋಬರ್ 2020, 5:49 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ದಿನದ ಆರಂಭಿಕ ವಹಿವಾಟಿನಲ್ಲಿ ಶುಕ್ರವಾರ ಅಮೆರಿಕನ್‌ ಡಾಲರ್‌ ಎದುರು ರೂಪಾಯಿ ಮೌಲ್ಯ 11 ಪೈಸೆ ಇಳಿಕೆ ಕಂಡು 73.65ಕ್ಕೆ ವಿನಿಮಯಗೊಂಡಿದೆ.

ಗುರುವಾರ ಡಾಲರ್‌ ಎದುರು ರೂಪಾಯಿ ಮೌಲ್ಯ 4 ಪೈಸೆ ಏರಿಕೆಯಾಗಿ 73.54ರಷ್ಟಿತ್ತು. ಇತರೆ ಕರೆನ್ಸಿಗಳ ಎದುರು ಡಾಲರ್‌ ಮೌಲ್ಯ 0.11ರಷ್ಟು ಏರಿಕೆಯಾಗಿ 93.05 ರಂತೆ ವಿನಿಮಯಗೊಂಡಿತ್ತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್‌ ಕಚ್ಚಾ ತೈಲ ದರ ಶೇ 0.31ರಷ್ಟು ಏರಿಕೆಯಾಗಿ ಒಂದು ಬ್ಯಾರೆಲ್‌ಗೆ 42.59 ಡಾಲರ್‌ಗೆ ಮಾರಾಟವಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.