ಮುಂಬೈ: ಭಾರತ ಮತ್ತು ಪಾಕಿಸ್ತಾನದ ನಡುವೆ ತಲೆದೋರಿರುವ ಬಿಕ್ಕಟ್ಟಿನಿಂದಾಗಿ ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಗುರುವಾರ ನಡೆದ ವಹಿವಾಟಿನಲ್ಲಿ ರೂಪಾಯಿ ಮೌಲ್ಯವು ತೀವ್ರವಾಗಿ ಕುಸಿತ ಕಂಡಿದೆ.
ಅಮೆರಿಕದ ಡಾಲರ್ ಎದುರು 84 ಪೈಸೆ ಇಳಿಕೆಯಾಗಿದೆ. ಪ್ರತೀ ಡಾಲರ್ ಮೌಲ್ಯ ₹85.61 ಆಗಿದೆ.
ಮತ್ತೊಂದೆಡೆ ಡಾಲರ್ ಸೂಚ್ಯಂಕ ಏರಿಕೆ ಕಂಡಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆಯಾಗಿದೆ. ಈ ಅಂಶಗಳು ರೂಪಾಯಿ ಮೌಲ್ಯ ಇಳಿಕೆಗೆ ಕಾರಣವಾಗಿವೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
ಉಭಯ ದೇಶಗಳ ನಡುವಿನ ಬಿಕ್ಕಟ್ಟು ಮುಂದುವರಿದರೆ ರೂಪಾಯಿಯು ಮತ್ತಷ್ಟು ಒತ್ತಡಕ್ಕೆ ಸಿಲುಕುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.