ADVERTISEMENT

Rupee vs Dollar: ರೂಪಾಯಿ 53 ಪೈಸೆ ಜಿಗಿತ

ಪಿಟಿಐ
Published 19 ಡಿಸೆಂಬರ್ 2025, 17:23 IST
Last Updated 19 ಡಿಸೆಂಬರ್ 2025, 17:23 IST
<div class="paragraphs"><p>ರೂಪಾಯಿ ಮೌಲ್ಯ</p></div>

ರೂಪಾಯಿ ಮೌಲ್ಯ

   

Credit: iStock Image

ನವದೆಹಲಿ/ ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆ ಯಲ್ಲಿ ಶುಕ್ರವಾರ ನಡೆದ ವಹಿವಾಟಿನಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 53 ಪೈಸೆಯಷ್ಟು ಏರಿಕೆ ಆಗಿದೆ. 

ADVERTISEMENT

ವಹಿವಾಟಿನ ಅಂತ್ಯದ ವೇಳೆಗೆ ರೂಪಾಯಿ ಮೌಲ್ಯವು ₹89.67 ಆಗಿದೆ. ದೇಶದ ಷೇರುಪೇಟೆ ಸೂಚ್ಯಂಕಗಳ ಏರಿಕೆ, ವಿದೇಶಿ ಬಂಡವಾಳದ ಒಳಹರಿವು ಮತ್ತು  ಕಚ್ಚಾ ತೈಲ ದರದ ಇಳಿಕೆಯು ರೂಪಾಯಿ ಮೌಲ್ಯ ಹೆಚ್ಚಳಕ್ಕೆ ಕಾರಣವಾಗಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ಗುರುವಾರದ ವಹಿವಾಟಿನ ಅಂತ್ಯದ ವೇಳೆಗೆ ರೂಪಾಯಿ ಮೌಲ್ಯ ₹90.20 ಇತ್ತು.

ಸೆನ್ಸೆಕ್ಸ್ 447 ಅಂಶ ಏರಿಕೆ: ವಿದೇಶಿ ಬಂಡವಾಳ ಒಳಹರಿವಿನಿಂದ ದೇಶದ ಷೇರುಪೇಟೆ ಸೂಚ್ಯಂಕಗಳು ಶುಕ್ರವಾರದ ವಹಿವಾಟಿನಲ್ಲಿ ಏರಿಕೆ ಕಂಡಿವೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 447 ಅಂಶ ಏರಿಕೆಯಾಗಿ, 84,929ಕ್ಕೆ ವಹಿವಾಟು ಅಂತ್ಯಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 150 ಅಂಶ ಹೆಚ್ಚಳವಾಗಿ, 25,966ಕ್ಕೆ ಕೊನೆಗೊಂಡಿದೆ.

ಭಾರತ್ ಎಲೆಕ್ಟ್ರಾನಿಕ್ಸ್, ಪವರ್ ಗ್ರಿಡ್, ಟಾಟಾ ಮೋಟರ್ಸ್ ಪ್ಯಾಸೆಂಜರ್ ವೆಹಿಕಲ್ಸ್, ಏಷ್ಯನ್ ಪೇಂಟ್ಸ್, ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ಬಜಾಜ್ ಫಿನ್‌ಸರ್ವ್‌ ಷೇರಿನ ಮೌಲ್ಯದಲ್ಲಿ ಏರಿಕೆ ಆಗಿದೆ.

ಎಚ್‌ಸಿಎಲ್ ಟೆಕ್, ಕೋಟಕ್ ಮಹೀಂದ್ರ ಬ್ಯಾಂಕ್, ಐಸಿಐಸಿಐ ಬ್ಯಾಂಕ್ ಮತ್ತು ಸನ್‌ಫಾರ್ಮಾ ಷೇರಿನ ಮೌಲ್ಯದಲ್ಲಿ ಇಳಿಕೆ ಆಗಿದೆ. ಏಷ್ಯಾದ
ಮಾರುಕಟ್ಟೆಯಲ್ಲಿ ದಕ್ಷಿಣ ಕೊರಿಯಾ, ಜಪಾನ್‌, ಶಾಂಘೈ ಮತ್ತು ಹಾಂಗ್‌ಕಾಂಗ್ ಷೇರಿನ ಮೌಲ್ಯದಲ್ಲಿ ಇಳಿಕೆ ಆಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರವು ಶ 0.40ರಷ್ಟು ಇಳಿದಿದೆ. ಪ್ರತೀ ಬ್ಯಾರಲ್ ದರವು 59.58 ಡಾಲರ್ ಆಗಿದೆ.

ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಗುರುವಾರದ ವಹಿವಾಟಿನಲ್ಲಿ ₹595 ಕೋಟಿ ಮತ್ತು ದೇಶೀಯ ಸಾಂಸ್ಥಿಕ ಹೂಡಿಕೆದಾರರು ₹2,700 ಕೋಟಿ ಮೌಲ್ಯದ ಷೇರುಗಳನ್ನು ಖರೀದಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.