ಮುಂಬೈ: ಸತತ ಎರಡನೇ ದಿನವಾದ ಮಂಗಳವಾರವೂ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 33 ಪೈಸೆ ಏರಿಕೆಯಾಗಿದೆ. ಪ್ರತೀ ಡಾಲರ್ ಮೌಲ್ಯ ₹85.77 ಆಗಿದೆ.
ದೇಶೀಯ ಷೇರುಪೇಟೆಯು ಏರಿಕೆಯ ಹಳಿಗೆ ಮರಳಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದೆ. ಚಿಲ್ಲರೆ ಹಣದುಬ್ಬರ ಕೂಡ ಇಳಿದಿದೆ. ಟ್ರಂಪ್ ಆಡಳಿತವು ಭಾರತದ ಮೇಲೆ ವಿಧಿಸಿದ್ದ ಪ್ರತಿ ಸುಂಕವನ್ನು ಜುಲೈ 9ರ ವರೆಗೆ ಮುಂದೂಡಿದೆ. ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಮೌಲ್ಯ ಇಳಿಕೆಯಾಗಿದೆ. ಈ ಅಂಶಗಳು ರೂಪಾಯಿ ಬಲಗೊಳ್ಳಲು ನೆರವಾಗಿವೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.