ADVERTISEMENT

₹ 83ಕ್ಕೆ ಕುಸಿದ ರೂಪಾಯಿ ಮೌಲ್ಯ

ಪಿಟಿಐ
Published 4 ಜನವರಿ 2023, 2:39 IST
Last Updated 4 ಜನವರಿ 2023, 2:39 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ರೂಪಾಯಿ ಮೌಲ್ಯವು ಅಮೆರಿಕದ ಡಾಲರ್ ಎದುರು ಇದೇ ಮೊದಲ ಬಾರಿಗೆ ₹ 83ರ ಮಟ್ಟಕ್ಕೆ ಕುಸಿದಿದೆ. ಅಮೆರಿಕದ ಡಾಲರ್‌ ಮೌಲ್ಯವೃದ್ಧಿ ಹಾಗೂ ದೇಶದ ಬಂಡವಾಳ ಮಾರುಕಟ್ಟೆಗಳಿಂದ ವಿದೇಶಿ ಬಂಡವಾಳದ ಹೊರಹರಿವು ರೂಪಾಯಿ ಮೌಲ್ಯ ಕುಸಿತಕ್ಕೆ ಕಾರಣ.

ಮಂಗಳವಾರದ ವಹಿವಾಟಿನ ಆರಂಭದಲ್ಲಿ ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ರೂಪಾಯಿ ಮೌಲ್ಯವು ಡಾಲರ್ ಎದುರು ₹ 82.69 ಆಗಿತ್ತು. ದಿನದ ಅಂತ್ಯಕ್ಕೆ 22 ಪೈಸೆಯಷ್ಟು ಮೌಲ್ಯ ಕಳೆದುಕೊಂಡ ರೂಪಾಯಿ, ₹ 83ಕ್ಕೆ ತಲುಪಿತು.

ಆಮದುದಾರರು ಡಾಲರ್‌ಅನ್ನು ಹೆಚ್ಚು ಖರೀದಿಸುತ್ತಿದ್ದಾರೆ. ಆದರೆ ವಿದೇಶಿ ಬಂಡವಾಳದ ಒಳಹರಿವು ಹೆಚ್ಚಿಲ್ಲ. ಹೂಡಿಕೆದಾರರು ಅಮೆರಿಕದ ಫೆಡರಲ್‌ ರಿಸರ್ವ್‌ನ ಮುಕ್ತ ಮಾರುಕಟ್ಟೆ ಸಮಿತಿಯ ಸಭೆಯ ವಿವರಗಳಿಗೆ ಎದುರು ನೋಡುತ್ತಿದ್ದಾರೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಸಂಶೋಧನಾ ವಿಶ್ಲೇಷಕ ದಿಲೀಪ್ ಪಾರ್ಮರ್ ಹೇಳಿದ್ದಾರೆ. ರೂಪಾಯಿ ಮೌಲ್ಯವು ಅಲ್ಪಾವಧಿಯಲ್ಲಿ ₹ 83.70ರವರೆಗೂ ಕುಸಿಯಬಹುದು ಎಂದು ಅವರು ಅಂದಾಜಿಸಿದ್ದಾರೆ.

ADVERTISEMENT

ವಿದೇಶಿ ಸಾಂಸ್ಥಿಕ ಹೂಡಿಕೆದಾರರು ಮಂಗಳವಾರದ ವಹಿವಾಟಿನಲ್ಲಿ ಒಟ್ಟು ₹ 628.07 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.