ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಬುಧವಾರ ನಡೆದ ವಹಿವಾಟಿನಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 89 ಪೈಸೆ ಕುಸಿದಿದೆ. ಡಾಲರ್ ಎದುರು ರೂಪಾಯಿ ಮೌಲ್ಯ ₹87.80 ಆಗಿದೆ. ಇದು ಮೂರು ವರ್ಷಗಳಲ್ಲಿ ರೂಪಾಯಿಯು ಒಂದೇ ದಿನದಲ್ಲಿ ಕಂಡ ಅತಿದೊಡ್ಡ ಕುಸಿತ.
ಆಗಸ್ಟ್ 1ರಿಂದ ಅಮೆರಿಕವು, ಭಾರತದಿಂದ ಆಮದಾಗುವ ಸರಕುಗಳ ಮೇಲೆ ಶೇ 25ರಷ್ಟು ಸುಂಕ ವಿಧಿಸಲಿದೆ. ಇದರಿಂದ ರೂಪಾಯಿ ಮೌಲ್ಯ ಕುಸಿತ ಕಂಡಿದೆ. ವಿದೇಶಿ ಬಂಡವಾಳದ ಹೊರಹರಿವು ಸಹ ಮೌಲ್ಯ ಇಳಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.