ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಬುಧವಾರ ನಡೆದ ವಹಿವಾಟಿನಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು 42 ಪೈಸೆ ಕುಸಿತವಾಗಿದೆ. ಪ್ರತೀ ಡಾಲರ್ ಮೌಲ್ಯವು ₹86.88 ಆಗಿದೆ.
ಡೊನಾಲ್ಡ್ ಟ್ರಂಪ್ ಅವರು, ಚೀನಾದ ಮೇಲೆ ಹೆಚ್ಚುವರಿ ಸುಂಕ ವಿಧಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಚೀನಾ ಕೂಡ ಅಮೆರಿಕದ ಸರಕುಗಳ ಮೇಲೆ ಸುಂಕ ಹೆಚ್ಚಿಸಿದೆ. ಇದರಿಂದ ಸೃಷ್ಟಿಯಾಗಿರುವ ವ್ಯಾಪಾರ ಬಿಕ್ಕಟ್ಟು ರೂಪಾಯಿ ಮೇಲೆ ಪರಿಣಾಮ ಬೀರಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.