ಮುಂಬೈ: ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯವು ಸೋಮವಾರದ ವಹಿವಾಟಿನಲ್ಲಿ 18 ಪೈಸೆ ಏರಿಕೆಯಾಗಿದೆ. ಪ್ರತೀ ಡಾಲರ್ ಮೌಲ್ಯವು ₹85.23 ಆಗಿದೆ.
ವಿದೇಶಿ ಬಂಡವಾಳ ಒಳಹರಿವು, ಕಚ್ಚಾ ತೈಲದ ಬೆಲೆ ಇಳಿಕೆ ಮತ್ತು ದೇಶದ ಷೇರು ಸೂಚ್ಯಂಕಗಳ ಏರಿಕೆಯು ರೂಪಾಯಿ ಮೌಲ್ಯ ಹೆಚ್ಚಳಕ್ಕೆ ನೆರವಾದವು ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.
ಶುಕ್ರವಾರದ ವಹಿವಾಟಿನಲ್ಲಿ ರೂಪಾಯಿ ಮೌಲ್ಯ 8 ಪೈಸೆ ಇಳಿಕೆಯಾಗಿ, ₹85.41 ಆಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.