ಸಾಂದರ್ಭಿಕ ಚಿತ್ರ
ಎ.ಐ ಚಿತ್ರ
ನವದೆಹಲಿ: ಜಾಗತಿಕ ರೇಟಿಂಗ್ ಸಂಸ್ಥೆ ಎಸ್ ಆ್ಯಂಡ್ ಪಿ ಗ್ಲೋಬಲ್, ಎಸ್‌ಬಿಐ, ಎಚ್‌ಡಿಎಫ್‌ಸಿ ಬ್ಯಾಂಕ್, ಟಾಟಾ ಕ್ಯಾಪಿಟಲ್ ಸೇರಿದಂತೆ ದೇಶದ ಪ್ರಮುಖ 10 ಹಣಕಾಸು ಸಂಸ್ಥೆಗಳ ರೇಟಿಂಗ್ ಅನ್ನು ಮೇಲ್ದರ್ಜೆಗೇರಿಸಿದೆ.
ಭಾರತದ ಹಣಕಾಸು ಸಂಸ್ಥೆಗಳು ದೇಶದ ಉತ್ತಮ ಆರ್ಥಿಕ ಬೆಳವಣಿಗೆಯ ವೇಗಕ್ಕೆ ನಿರಂತರವಾಗಿ ಚಾಲನೆ ನೀಡುತ್ತಿವೆ. ಈ ಸಂಸ್ಥೆಗಳು ವಸೂಲಾಗದ ಸಾಲದ ಪ್ರಮಾಣದಲ್ಲಿ ಸುಧಾರಣೆ ಕಂಡಿವೆ ಎಂದು ಶುಕ್ರವಾರ ಹೇಳಿದೆ.
ಎಸ್‌ಬಿಐ, ಐಸಿಐಸಿಐ ಬ್ಯಾಂಕ್, ಎಚ್‌ಡಿಎಫ್‌ಸಿ ಬ್ಯಾಂಕ್, ಎಕ್ಸಿಸ್ ಬ್ಯಾಂಕ್, ಕೋಟಕ್ ಮಹೀಂದ್ರ ಬ್ಯಾಂಕ್, ಯೂನಿಯನ್ ಬ್ಯಾಂಕ್, ಇಂಡಿಯನ್ ಬ್ಯಾಂಕ್, ಬಜಾಜ್ ಫೈನಾನ್ಸ್, ಟಾಟಾ ಕ್ಯಾಪಿಟಲ್ ಮತ್ತು ಎಲ್ ಆ್ಯಂಡ್ ಟಿ ಫೈನಾನ್ಸ್ ಸಂಸ್ಥೆಗಳ ರೇಟಿಂಗ್ ಅನ್ನು ಮೇಲ್ದರ್ಜೆಗೇರಿಸಲಾಗಿದೆ.
ಭಾರತದ ಬ್ಯಾಂಕ್‌ಗಳು ಮುಂದಿನ 12 ತಿಂಗಳಿನಿಂದ 14 ತಿಂಗಳಿನಲ್ಲಿ ಉತ್ತಮ ಲಾಭದಾಯಕತೆ ಮತ್ತು ಬಂಡವಾಳವನ್ನು ಹೊಂದುವ ನಿರೀಕ್ಷೆಯಿದೆ ಎಂದು ಹೇಳಿದೆ.
Highlights - null
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.