ADVERTISEMENT

ಕುಸುಬೆ ಖರೀದಿಗೆ ಕೇಂದ್ರ ಅನುಮತಿ; ಕ್ವಿಂಟಲ್‌ಗೆ ₹5,940 ಬೆಲೆ: ಶಿವಾನಂದ ಪಾಟೀಲ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2025, 14:19 IST
Last Updated 1 ಮಾರ್ಚ್ 2025, 14:19 IST
<div class="paragraphs"><p>ಶಿವಾನಂದ ಪಾಟೀಲ</p></div>

ಶಿವಾನಂದ ಪಾಟೀಲ

   

ಬೆಂಗಳೂರು: ರಾಜ್ಯ ಸರ್ಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರವು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕುಸುಬೆ ಖರೀದಿಸಲು ಒಪ್ಪಿಗೆ ನೀಡಿದೆ. ಪ್ರತಿ ಕ್ವಿಂಟಲ್‌ಗೆ ₹5,940 ದರ ನಿಗದಿಪಡಿಸಿದೆ.

ರಾಜ್ಯದ ಬೀದರ್‌, ಧಾರವಾಡ, ದಾವಣಗೆರೆ, ಗದಗ, ವಿಜಯಪುರ, ಕಲಬುರಗಿ, ಚಿತ್ರದುರ್ಗ, ಕೊಪ್ಪಳ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಅತಿಹೆಚ್ಚು ಪ್ರಮಾಣದಲ್ಲಿ ಕುಸುಬೆ ಬೆಳೆಯಲಾಗುತ್ತಿದೆ.

ADVERTISEMENT

‘ಪ್ರಸ್ತುತ ಮಾರುಕಟ್ಟೆಯಲ್ಲಿ ಕುಸುಬೆ ದರ ಕುಸಿದಿದೆ. ಹಾಗಾಗಿ, ಬೆಂಬಲ ಬೆಲೆಯಡಿ ಖರೀದಿಗೆ ಸರ್ಕಾರದಿಂದ ಪ್ರಸ್ತಾವ ಸಲ್ಲಿಸಲಾಗಿತ್ತು. ಇದಕ್ಕೆ ಅನುಮೋದನೆ ನೀಡಿದೆ. ಸಂಬಂಧಪಟ್ಟವರಿಗೆ ಖರೀದಿ ಪ್ರಕ್ರಿಯೆ ಆರಂಭಿಸಲು ನಿರ್ದೇಶನ ಕೂಡ ನೀಡಲಾಗಿದೆ’ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಎಸ್‌. ಪಾಟೀಲ ತಿಳಿಸಿದ್ದಾರೆ.

ಈಗಾಗಲೇ ಕಟಾವು ಪ್ರಕ್ರಿಯೆ ಆರಂಭವಾಗಿದ್ದು, ಮಾರ್ಚ್‌ ತಿಂಗಳವರೆಗೆ  ನಡೆಯಲಿದೆ. ಏಪ್ರಿಲ್‌ವರೆಗೂ ಮಾರುಕಟ್ಟೆಗೆ ಆವಕವಾಗಲಿದೆ. ರೈತರು ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಮಾರಾಟ ಮಾಡದೆ ಖರೀದಿ ಕೇಂದ್ರಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.