
ಪ್ರಜಾವಾಣಿ ವಾರ್ತೆ
ಬೆಳಗಾವಿ: ಬೆಳಗಾವಿಯಲ್ಲಿ ವಿಮಾನ ಹಾರಾಟ ತರಬೇತಿ ಸಂಸ್ಥೆ ತೆರೆಯಲು ಅವಕಾಶವಿದ್ದು, ಇದಕ್ಕಾಗಿ ಕೇಂದ್ರದಿಂದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಕೇಂದ್ರ ವಿಮಾನಯಾನ ರಾಜ್ಯ ಸಚಿವ ಜಯಂತ್ ಸಿನ್ಹಾ ಹೇಳಿದರು.
‘ಸಾಂಬ್ರಾ ವಿಮಾನ ನಿಲ್ದಾಣವನ್ನು ‘ಉಡಾನ್–3’ ಯೋಜನೆಯಲ್ಲಿ ಸೇರಿಸಲಾಗುವುದು. 10ರಿಂದ 12 ವಿಮಾನಗಳ ಹಾರಾಟ ಸೇವೆ ಪ್ರಾರಂಭವಾಗಲಿದೆ. ಸರಕು ಸಾಗಣೆ ವಿಮಾನ ಹಾರಾಟ ಆರಂಭಿಸುವ ಬಗ್ಗೆ ಸಮಗ್ರ ಯೋಜನಾ ವರದಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಇದರಿಂದ ತರಕಾರಿ, ಹೂವು ರಫ್ತಿಗೂ ಸಹಕಾರಿಯಾಗುತ್ತದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.