ADVERTISEMENT

ಸ್ಯಾಮ್ಸಂಗ್‌ ನೌಕರರ ಹೋರಾಟ ಅಂತ್ಯ

ಪಿಟಿಐ
Published 8 ಮಾರ್ಚ್ 2025, 14:21 IST
Last Updated 8 ಮಾರ್ಚ್ 2025, 14:21 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

‌‌‌ಚೆನ್ನೈ: ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ಇರುವ ಸ್ಯಾಮ್ಸಂಗ್‌ ಕಂಪನಿ ಮುಂಭಾಗ ಒಂದು ತಿಂಗಳಿನಿಂದ ನಡೆಯುತ್ತಿದ್ದ  ಹೋರಾಟವು ಅಂತ್ಯಗೊಂಡಿದ್ದು, ನೌಕರರು ಕೆಲಸಕ್ಕೆ ಹಾಜರಾಗಿದ್ದಾರೆ ಎಂದು ಸಿಐಟಿಯು ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಎ. ಸೌಂದರರಾಜನ್‌ ತಿಳಿಸಿದ್ದಾರೆ.

ನೌಕರರು ಮುಷ್ಕರ ಸ್ಥಗಿತಗೊಳಿಸಿರುವುದನ್ನು ಸ್ವಾಗತಿಸಲಾಗುವುದು. ಕಾರ್ಖಾನೆ ಆವರಣದಲ್ಲಿ ಶಿಸ್ತು ಕಾಪಾಡಿಕೊಳ್ಳಲು ಬದ್ಧ. ನೌಕರರ ಸಮಸ್ಯೆಗಳನ್ನು ನೇರವಾಗಿ ಬಗೆಹರಿಸಲಾಗುವುದು. ಆ ಮೂಲಕ ಕಂಪನಿಯಲ್ಲಿ ಕೆಲಸ ನಿರ್ವಹಣೆಯ ವಾತಾವರಣ ಕಾಯ್ದುಕೊಳ್ಳಲು ಒತ್ತು ನೀಡಲಾಗುವುದು ಎಂದು ವಕ್ತಾರರು ತಿಳಿಸಿದ್ದಾರೆ.

ಕಂಪನಿಯ ಕಾರ್ಯಾಚರಣೆಗೆ ಅಡ್ಡಿಪಡಿಸಿದ್ದ ಕೆಲವು ನೌಕರರನ್ನು ಕೆಲಸದಿಂದ ಅಮಾನತುಗೊಳಿಸಲಾಗಿತ್ತು. ಈ ನೌಕರರನ್ನು ಪುನಃ ನೇಮಕಾತಿ ಮಾಡಿಕೊಳ್ಳುವಂತೆ ಆಗ್ರಹಿಸಿ ಸಿಐಟಿಯು ನೇತೃತ್ವದಡಿ ಹೋರಾಟ ಹಮ್ಮಿಕೊಳ್ಳಲಾಗಿತ್ತು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.