ADVERTISEMENT

ವಿಮಾ ಉತ್ಪನ್ನಗಳ ಬಲವಂತದ ಮಾರಾಟ ಬೇಡ: ಎಸ್‌ಬಿಐ

ಪಿಟಿಐ
Published 1 ಜನವರಿ 2023, 13:12 IST
Last Updated 1 ಜನವರಿ 2023, 13:12 IST
   

ನವದೆಹಲಿ: ವಿಮಾ ಉತ್ಪನ್ನಗಳನ್ನು ಗ್ರಾಹಕರಿಗೆ ಬಲವಂತವಾಗಿ ಮಾರಾಟ ಮಾಡದಂತೆ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ತನ್ನ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ವಿಮಾ ಉತ್ಪನ್ನಗಳನ್ನು ಗ್ರಾಹಕರಿಗೆ ಬಲವಂತವಾಗಿ ಮಾರಾಟ ಮಾಡಲಾಗುತ್ತಿದೆ ಎಂದು ದೂರುಗಳು ಬರುವುದು ಹೆಚ್ಚಾಗುತ್ತಿದೆ. ಹೀಗಾಗಿ ಬಲವಂತವಾಗಿ ವಿಮಾ ಉತ್ಪನ್ನಗಳನ್ನು ಮಾರಾಟ ಮಾಡಬಾರದು ಎಂದು ಹಣಕಾಸು ಸೇವೆಗಳ ಇಲಾಖೆಯು ಸರ್ಕಾರಿ ಸ್ವಾಮ್ಯದ ಎಲ್ಲ ಬ್ಯಾಂಕ್‌ಗಳ ಮುಖ್ಯಸ್ಥರಿಗೆ ಬರೆದಿರುವ ಪತ್ರದಲ್ಲಿ ಸೂಚನೆ ನೀಡಿದೆ.

ಎರಡು ಮತ್ತು ಮೂರನೇ ಶ್ರೇಣಿಯ ನಗರಗಳಲ್ಲಿ 75 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಜೀವ ವಿಮೆ ಯೋಜನೆಗಳನ್ನು ಮಾರಾಟ ಮಾಡಿರುವ ಉದಾಹರಣೆಗಳು ಇವೆ ಎಂದು ಇಲಾಖೆಯು ತನ್ನ ಪತ್ರದಲ್ಲಿ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.