ADVERTISEMENT

ಕೆರೆ ಅಭಿವೃದ್ಧಿಗೆ ಎಸ್‌ಬಿಐ ನೆರವು

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2022, 15:27 IST
Last Updated 9 ಡಿಸೆಂಬರ್ 2022, 15:27 IST
ಎಸ್‌ಬಿಐ ಬೆಂಗಳೂರು ವೃತ್ತದ ಮುಖ್ಯ ಜನರಲ್ ಮ್ಯಾನೇಜರ್ ನಂದಕಿಶೋರ್ ಅವರು ₹ 4.26 ಕೋಟಿ ಮೊತ್ತದ ಚೆಕ್‌ಅನ್ನು ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಯುಕೇಶ್ ಕುಮಾರ್ ಅವರಿಗೆ ಹಸ್ತಾಂತರಿಸಿದರು.
ಎಸ್‌ಬಿಐ ಬೆಂಗಳೂರು ವೃತ್ತದ ಮುಖ್ಯ ಜನರಲ್ ಮ್ಯಾನೇಜರ್ ನಂದಕಿಶೋರ್ ಅವರು ₹ 4.26 ಕೋಟಿ ಮೊತ್ತದ ಚೆಕ್‌ಅನ್ನು ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಯುಕೇಶ್ ಕುಮಾರ್ ಅವರಿಗೆ ಹಸ್ತಾಂತರಿಸಿದರು.   

ಬೆಂಗಳೂರು: ಭಾರತೀಯ ಸ್ಟೇಟ್ ಬ್ಯಾಂಕ್‌ (ಎಸ್‌ಬಿಐ) ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಕಾರ್ಯಕ್ರಮದ ಅಡಿಯಲ್ಲಿ ಕೋಲಾರ ಜಿಲ್ಲೆಯ ಏಳು ಪ್ರಮುಖ ಕೆರೆಗಳ ಪುನರುಜ್ಜೀವನವನ್ನು ಕೈಗೆತ್ತಿಕೊಂಡಿದೆ.

ಈ ಉದ್ದೇಶಕ್ಕಾಗಿ ₹ 4.26 ಕೋಟಿ ಮೊತ್ತವನ್ನು ಮಂಜೂರು ಮಾಡಲಾಗಿದೆ ಎಂದು ಎಸ್‌ಬಿಐ ಹೇಳಿದೆ. ‘ಈ ತೀರ್ಮಾನವು ಸುಸ್ಥಿರ ಅಭಿವೃದ್ಧಿ ವಿಚಾರದಲ್ಲಿ ಬ್ಯಾಂಕ್‌ ಹೊಂದಿರುವ ಬದ್ಧತೆಯನ್ನು ತೋರಿಸುತ್ತದೆ. ಬ್ಯಾಂಕ್‌ನ ಬೆಂಗಳೂರು ವೃತ್ತದ ಮುಖ್ಯ ಜನರಲ್ ಮ್ಯಾನೇಜರ್ ನಂದಕಿಶೋರ್ ಅವರು ₹ 4.26 ಕೋಟಿ ಮೊತ್ತ ಮಂಜೂರು ಮಾಡಿರುವುದಕ್ಕೆ ಸಂಬಂಧಿಸಿದ ಪತ್ರವನ್ನು ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಯುಕೇಶ್ ಕುಮಾರ್ ಅವರಿಗೆ ಹಸ್ತಾಂತರಿಸಿದ್ದಾರೆ’ ಎಂದು ಪ್ರಕಟಣೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT