ADVERTISEMENT

ಎಸ್‌ಬಿಐ ಲಾಭ ಶೇ 55ರಷ್ಟು ಹೆಚ್ಚಳ

ಪಿಟಿಐ
Published 4 ನವೆಂಬರ್ 2020, 14:45 IST
Last Updated 4 ನವೆಂಬರ್ 2020, 14:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ಭಾರತೀಯ ಸ್ಟೇಟ್‌ ಬ್ಯಾಂಕ್‌ನ (ಎಸ್‌ಬಿಐ) ಒಟ್ಟಾರೆ ನಿವ್ವಳ ಲಾಭ ಜುಲೈ–ಸೆಪ್ಟೆಂಬರ್ ಅವಧಿಯಲ್ಲಿ ಶೇಕಡ 55ರಷ್ಟು ಹೆಚ್ಚಾಗಿದ್ದು, ₹ 5,245.88 ಕೋಟಿಗೆ ತಲುಪಿದೆ. ಸುಸ್ತಿ ಸಾಲದಲ್ಲಿ ಇಳಿಕೆ ಆಗಿರುವುದರಿಂದ ಈ ಪ್ರಮಾಣದ ಲಾಭ ಗಳಿಸಲು ಸಾಧ್ಯವಾಗಿದೆ ಎಂದು ಬ್ಯಾಂಕ್‌ ಹೇಳಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ನಿವ್ವಳ ಲಾಭ ₹ 3,375.40 ಕೋಟಿ ಇತ್ತು ಎಂದು ಬ್ಯಾಂಕ್‌ ಷೇರುಪೇಟೆಗೆ ಮಾಹಿತಿ ನೀಡಿದೆ. ಎಸ್‌ಬಿಐ ಸಮೂಹದ ಒಟ್ಟಾರೆ ವರಮಾನ ₹ 89,348 ಕೋಟಿಗಳಿಂದ ₹ 95,353 ಕೋಟಿಗಳಿಗೆ ಏರಿಕೆಯಾಗಿದೆ.

ಬ್ಯಾಂಕ್‌ನ ಆಸ್ತಿ ಗುಣಮಟ್ಟದಲ್ಲಿ ಸುಧಾರಣೆ ಕಂಡುಬಂದಿದೆ. ವಸೂಲಾಗದ ಸರಾಸರಿ ಸಾಲದ ಪ್ರಮಾಣ (ಎನ್‌ಪಿಎ) ಶೇ 7.19ರಿಂದ ಶೇ 5.28ಕ್ಕೆ ಇಳಿಕೆಯಾಗಿದೆ. ಅದೇ ರೀತಿ ನಿವ್ವಳ ಎನ್‌ಪಿಎ ಶೇ 2.79ರಿಂದ ಶೇ 1.59ಕ್ಕೆ ಇಳಿಕೆಯಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.