ADVERTISEMENT

ಎಸ್‌ಬಿಐ, ಎಲ್‌ಐಸಿ, ಬ್ಯಾಂಕ್‌ ಆಫ್‌ ಬರೋಡಾಗೆ ದಂಡ

ಪಿಟಿಐ
Published 14 ಆಗಸ್ಟ್ 2020, 23:31 IST
Last Updated 14 ಆಗಸ್ಟ್ 2020, 23:31 IST
 ಭಾರತೀಯ ಸ್ಟೇಟ್‌ ಬ್ಯಾಂಕ್‌
ಭಾರತೀಯ ಸ್ಟೇಟ್‌ ಬ್ಯಾಂಕ್‌    

ನವದೆಹಲಿ: ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ), ಭಾರತೀಯ ಜೀವ ವಿಮಾ ನಿಗಮ (ಎಲ್‌ಐಸಿ) ಹಾಗೂ ಬ್ಯಾಂಕ್‌ ಆಫ್ ಬರೋಡಾ ಮೇಲೆ ಭಾರತೀಯ ಷೇರುಪೇಟೆ ನಿಯಂತ್ರಣ ಮಂಡಳಿಯು (ಸೆಬಿ) ತಲಾ ₹ 10 ಲಕ್ಷ ದಂಡ ವಿಧಿಸಿದೆ.

ಮ್ಯೂಚುವಲ್‌ ಫಂಡ್‌ಗಳಿಗೆ ಸಂಬಂಧಿಸಿದ ನಿಯಮಗಳನ್ನು ಪಾಲಿಸದೆ ಇದ್ದುದಕ್ಕಾಗಿ ಈ ದಂಡ ವಿಧಿಸಲಾಗಿದೆ. ಎಸ್‌ಬಿಐ, ಎಲ್‌ಐಸಿ ಮತ್ತು ಬ್ಯಾಂಕ್‌ ಆಫ್‌ ಬರೋಡಾ ತಮ್ಮದೇ ಆದ ಮ್ಯೂಚುವಲ್‌ ಫಂಡ್‌ ಕಂಪನಿ ನಡೆಸುತ್ತಿವೆ.

ಇವು ಈ ಮ್ಯೂಚುವಲ್‌ ಫಂಡ್‌ ಕಂಪನಿಗಳಲ್ಲಿ ಶೇಕಡ 10ರಷ್ಟಕ್ಕಿಂತ ಹೆಚ್ಚಿನ ಪಾಲನ್ನು ಹೊಂದಿವೆ.

ADVERTISEMENT

ಎಲ್‌ಐಸಿ, ಎಸ್‌ಬಿಐ ಹಾಗೂ ಬ್ಯಾಂಕ್ ಆಫ್ ಬರೋಡಾ ಸಂಸ್ಥೆಗಳು, ಯುಟಿಐ ಆಸ್ತಿ ನಿರ್ವಹಣಾ ಕಂಪನಿಯ ಪ್ರಾಯೋಜಕರಾಗಿದ್ದು, ಅಲ್ಲಿಯೂ ಶೇ 10ಕ್ಕಿಂತ ಹೆಚ್ಚಿನ ಪಾಲು ಹೊಂದಿವೆ ಎಂಬುದು ಸೆಬಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.