ADVERTISEMENT

ಬೈಜುಸ್‌ ಸಭೆಗೆ ತಡೆ ನೀಡಲು ನಕಾರ

ಪಿಟಿಐ
Published 21 ಮಾರ್ಚ್ 2024, 16:27 IST
Last Updated 21 ಮಾರ್ಚ್ 2024, 16:27 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ನವದೆಹಲಿ: ಬೈಜುಸ್‌ ಕಂಪನಿಯ ಮಾತೃಸಂಸ್ಥೆಯಾದ ಥಿಂಕ್‌ ಆ್ಯಂಡ್‌ ಲರ್ನ್‌, ಮಾರ್ಚ್‌ 29ರಂದು ವಿಶೇಷ ಸಾಮಾನ್ಯ ಸಭೆ (ಇಜಿಎಂ) ಕರೆದಿದೆ.

ಇದಕ್ಕೆ ಕೆಲವು ಪ್ರಮುಖ ಹೂಡಿಕೆದಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಭೆಗೆ ಅನುಮತಿ ನೀಡದಂತೆ ತಡೆ ಕೋರಿ ರಾಷ್ಟ್ರೀಯ ಕಂಪನಿ ಕಾನೂನು ನ್ಯಾಯಮಂಡಳಿಯ (ಎನ್‌ಸಿಎಲ್‌ಟಿ) ಬೆಂಗಳೂರು ಘಟಕದ ಮೊರೆ ಹೋಗಿದ್ದಾರೆ. ಆದರೆ, ನ್ಯಾಯಮಂಡಳಿಯು ತಕ್ಷಣಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿದೆ ಎಂದು ಮೂಲಗಳು ತಿಳಿಸಿವೆ.

ಕಂಪನಿಯ ಒಟ್ಟು ₹1,664 (200 ಮಿಲಿಯನ್‌ ಡಾಲರ್‌) ಕೋಟಿ ಮೊತ್ತದ ಅಧಿಕೃತ ಷೇರು ಬಂಡವಾಳ ಹೆಚ್ಚಳಕ್ಕೆ ಸಂಬಂಧಿಸಿದಂತೆ ಒಪ್ಪಿಗೆ ಪಡೆಯಲು ಈ ಸಭೆ ಕರೆಯಲಾಗಿದೆ ಎಂದು ಹೇಳಲಾಗಿದೆ.

ADVERTISEMENT

ಹೂಡಿಕೆದಾರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮಂಡಳಿಯು ಮಾರ್ಚ್‌ 28ಕ್ಕೆ ವಿಚಾರಣೆಯನ್ನು ಮುಂದೂಡಿದೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.