ADVERTISEMENT

ಮಾರಾಟದ ಒತ್ತಡಕ್ಕೆ ಸಿಲುಕಿದ ಷೇರುಪೇಟೆ: ಸೆನ್ಸೆಕ್ಸ್, ನಿಫ್ಟಿ ಇಳಿಕೆ

ಪಿಟಿಐ
Published 6 ಆಗಸ್ಟ್ 2025, 15:36 IST
Last Updated 6 ಆಗಸ್ಟ್ 2025, 15:36 IST
ಸೆನ್ಸೆಕ್ಸ್
ಸೆನ್ಸೆಕ್ಸ್   

ಮುಂಬೈ: ಐ.ಟಿ ಮತ್ತು ಆರೋಗ್ಯ ವಲಯದ ಕಂಪನಿಗಳ ಷೇರುಗಳು ಮಾರಾಟದ ಒತ್ತಡಕ್ಕೆ ಸಿಲುಕಿದ್ದರಿಂದ ದೇಶದ ಷೇರುಪೇಟೆ ಸೂಚ್ಯಂಕಗಳು ಬುಧವಾರದ ವಹಿವಾಟಿನಲ್ಲಿ ಇಳಿಕೆ ಕಂಡಿವೆ.

ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 166 ಅಂಶ ಇಳಿಕೆಯಾಗಿ, 80,543ಕ್ಕೆ ವಹಿವಾಟು ಅಂತ್ಯಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 75 ಅಂಶ ಕಡಿಮೆಯಾಗಿ, 24,574ಕ್ಕೆ ಕೊನೆಗೊಂಡಿದೆ.

ಕಳೆದ ಎರಡು ದಿನದಲ್ಲಿ ಸೂಚ್ಯಂಕಗಳ ಇಳಿಕೆಯಿಂದಾಗಿ ಹೂಡಿಕೆದಾರರ ಸಂಪತ್ತು ₹3.50 ಲಕ್ಷ ಕೋಟಿಯಷ್ಟು ಕರಗಿದೆ. 

ADVERTISEMENT

ಜಾಗತಿಕ ಮಾರುಕಟ್ಟೆಯಲ್ಲಿ ಬ್ರೆಂಟ್‌ ಕಚ್ಚಾ ತೈಲ ದರವು ಶೇ 1.61ರಷ್ಟು ಏರಿಕೆಯಾಗಿದೆ. ಪ್ರತಿ ಬ್ಯಾರೆಲ್ ಬೆಲೆ 68.73 ಡಾಲರ್ ಆಗಿದೆ.

‘ಅಮೆರಿಕದ ಸುಂಕ ನೀತಿಯಿಂದ ದೇಶದ ಔಷಧ ವಲಯದ ಕಂಪನಿಗಳ ಷೇರಿನ ಮೌಲ್ಯವು ಇಳಿಕೆ ಕಂಡಿದೆ’ ಎಂದು ಜಿಯೋಜಿತ್ ಇನ್ವೆಸ್ಟ್‌ಮೆಂಟ್‌ನ ಮುಖ್ಯ ಅರ್ಥಶಾಸ್ತ್ರಜ್ಞ ವಿನೋದ್ ನಾಯರ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.