ಮುಂಬೈ: ದೇಶದ ಷೇರುಪೇಟೆಯಲ್ಲಿ ಶುಕ್ರವಾರ ನಡೆದ ವಹಿವಾಟಿನಲ್ಲಿ ಸೂಚ್ಯಂಕಗಳು ಏರಿಕೆಯಾಗಿವೆ.
ಅಮೆರಿಕ ಮತ್ತು ಭಾರತದ ನಡುವಿನ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವು ಫಲಪ್ರದವಾಗುವ ನಿರೀಕ್ಷೆಯಿದೆ. ಜಿಎಸ್‌ಟಿ ಸಂಗ್ರಹದಲ್ಲಿ ಏರಿಕೆಯಾಗಿದೆ. ಈಕ್ವಿಟಿ ಮಾರುಕಟ್ಟೆಯಲ್ಲಿ ವಿದೇಶಿ ಬಂಡವಾಳದ ಒಳಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಇದು ಹೂಡಿಕೆದಾರರಲ್ಲಿ ವಿಶ್ವಾಸ ಮೂಡಿಸಿದ್ದು, ಷೇರುಪೇಟೆ ಏರಿಕೆಗೆ ಕಾರಣವಾಗಿದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 259 ಅಂಶ ಹೆಚ್ಚಳ ಕಂಡು, 80,501 ಅಂಶಗಳಲ್ಲಿ ವಹಿವಾಟು ಮುಕ್ತಾಯವಾಯಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 12 ಅಂಶ ಏರಿಕೆ ಕಂಡಿದ್ದು, 24,346 ಅಂಶಗಳಲ್ಲಿ ಸ್ಥಿರಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.