ADVERTISEMENT

ಸೆನ್ಸೆಕ್ಸ್‌ 465 ಅಂಶ ಏರಿಕೆ

ಪಿಟಿಐ
Published 8 ಆಗಸ್ಟ್ 2022, 13:11 IST
Last Updated 8 ಆಗಸ್ಟ್ 2022, 13:11 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಜಾಗತಿಕ ಮಾರುಕಟ್ಟೆಗಳಲ್ಲಿನ ಸಕಾರಾತ್ಮಕ ಚಲನೆಯ ಜೊತೆಗೆಎಚ್‌ಡಿಎಫ್‌ಸಿ, ಎಚ್‌ಡಿಎಫ್‌ಸಿ ಬ್ಯಾಂಕ್‌ ಮತ್ತು ರಿಲಯನ್ಸ್‌ ಇಂಡಸ್ಟ್ರೀಸ್‌ ಷೇರುಗಳು ಉತ್ತಮ ಗಳಿಕೆ ಕಂಡವು. ಇದರಿಂದಾಗಿ ದೇಶಿ ಷೇರುಪೇಟೆಗಳ ವಹಿವಾಟು ಸೋಮವಾರ ಏರಿಕೆ ಕಂಡಿತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ 465 ಅಂಶ ಹೆಚ್ಚಾಗಿ 58,853 ಅಂಶಗಳಿಗೆ ತಲುಪಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 127 ಅಂಶ ಏರಿಕೆ ಕಂಡು 17,525 ಅಂಶಗಳಿಗೆ ತಲುಪಿತು.

‘ಷೇರು‍ಪೇಟೆಯಲ್ಲಿನ ಸದ್ಯದ ಏರಿಕೆಗೆ ವಿದೇಶಿ ಸಾಂಸ್ಥಿಕ ಬಂಡವಾಳದ ಒಳಹರಿವು ಮತ್ತು ಕಚ್ಚಾ ತೈಲ ದರ ಇಳಿಕೆ ಪ್ರಮುಖ ಕಾರಣಗಳು’ ಎಂದು ಜಿಯೋಜಿತ್‌ ಫೈನಾನ್ಶಿಯಲ್‌ ಸರ್ವಿಸಸ್‌ನ ಸಂಶೋಧನಾ ವಿಭಾಗದ ಮುಖ್ಯಸ್ಥ ವಿನೋದ್ ನಾಯರ್‌ ಹೇಳಿದ್ದಾರೆ.

ADVERTISEMENT

ಏಷ್ಯಾದಲ್ಲಿ ಸೋಲ್‌, ಶಾಂಘೈ ಮತ್ತು ಟೋಕಿಯೊ ಷೇರುಪೇಟೆಗಳು ಗರಿಷ್ಠ ಮಟ್ಟದಲ್ಲಿ ವಹಿವಾಟು ಅಂತ್ಯಗೊಳಿಸಿದವು. ಹಾಂಗ್‌ಕಾಂಗ್‌ ಷೇರುಪೇಟೆ ನಷ್ಟ ಕಂಡಿತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲ ದರ ಶೇ 0.68ರಷ್ಟು ಇಳಿಕೆ ಕಂಡು ಒಂದು ಬ್ಯಾರಲ್‌ಗೆ 94.32 ಡಾಲರ್‌ಗೆ ತಲುಪಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.