ADVERTISEMENT

ಷೇರುಪೇಟೆಯಲ್ಲಿ ಮಾರಾಟದ ಒತ್ತಡ

ಪಿಟಿಐ
Published 11 ಫೆಬ್ರುವರಿ 2019, 18:45 IST
Last Updated 11 ಫೆಬ್ರುವರಿ 2019, 18:45 IST

ಮುಂಬೈ: ಮಾರಾಟದ ಒತ್ತಡಕ್ಕೆ ಒಳಗಾಗಿ ದೇಶದ ಷೇರುಪೇಟೆಗಳಲ್ಲಿ ವಹಿವಾಟು ಇಳಿಕೆ ಕಂಡಿದೆ.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು (ಬಿಎಸ್‌ಇ) 151 ಅಂಶ ಇಳಿಕೆಯಾಗಿ 36,395 ಅಂಶಗಳಲ್ಲಿ ವಹಿವಾಟು ಅಂತ್ಯವಾಗಿದೆ. ಹಿಂದಿನ ಎರಡು ದಿನಗಳ ವಹಿವಾಟು ಅವಧಿಗಳಲ್ಲಿ 429 ಅಂಶ ಇಳಿಕೆ ಕಂಡಿದೆ.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 50 ಅಂಶ ಇಳಿಕೆಯಾಗಿ 10,888 ಅಂಶಗಳಲ್ಲಿ ವಹಿವಾಟು ಅಂತ್ಯ ಕಂಡಿದೆ.

ADVERTISEMENT

ಜಾಗತಿಕ ಮಾರುಕಟ್ಟೆಯಲ್ಲಿ ವಹಿವಾಟು ಚೇತರಿಕೆ ಕಂಡಿದೆ. ಹೀಗಿದ್ದರೂ ಸಾರ್ವತ್ರಿಕ ಚುನಾವಣೆಯ ಕಾರಣಕ್ಕಾಗಿ ಹೂಡಿಕೆ ಚಟುವಟಿಕೆಯಲ್ಲಿ ಏರಿಳಿತ ಆಗುತ್ತಿದೆ. ಇದರಿಂದ ಸೂಚ್ಯಂಕ ಇಳಿಮುಖವಾಗಿದೆ ಎಂದು ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.