ADVERTISEMENT

ಸೆನ್ಸೆಕ್ಸ್‌ 420 ಅಂಶ ಇಳಿಕೆ

ಪಿಟಿಐ
Published 10 ನವೆಂಬರ್ 2022, 12:48 IST
Last Updated 10 ನವೆಂಬರ್ 2022, 12:48 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಮಾರಾಟದ ಒತ್ತಡಕ್ಕೆ ಒಳಗಾಗಿ ದೇಶದ ಷೇರುಪೇಟೆಗಳ ವಹಿವಾಟು ಗುರುವಾರ ಇಳಿಕೆ ಕಂಡಿತು. ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್‌ 420 ಅಂಶ ಇಳಿಕೆಯಾಗಿ 61 ಸಾವಿರಕ್ಕಿಂತ ಕಡಿಮೆ ಮಟ್ಟದಲ್ಲಿ ವಹಿವಾಟು ಅಂತ್ಯಗೊಳಿಸಿತು. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 128 ಅಂಶ ಇಳಿಕೆಯಾಗಿ 18,028 ಅಂಶಗಳಿಗೆ ತಲುಪಿತು.

ಜಾಗತಿಕ ಮಾರುಕಟ್ಟೆಗಳಲ್ಲಿ ಕಂಡುಬಂದ ಮಾರಾಟದ ಒತ್ತಡದ ಜೊತೆಗೆ ಮಹೀಂದ್ರ, ಬಜಾಜ್‌ ಫಿನ್‌ಸರ್ವ್‌ ಮತ್ತು ರಿಲಯನ್ಸ್‌ ಇಂಡಸ್ಟ್ರೀಸ್‌ ಷೇರುಗಳು ಮೌಲ್ಯ ಇಳಿಕೆ ಸಹ ವಹಿವಾಟಿನ ಮೇಲೆ ಪರಿಣಾಮ ಬೀರಿತು. ಎಕ್ಸಿಸ್‌ ಬ್ಯಾಂಕ್‌ ಷೇರು ಮೌಲ್ಯ ಶೇ 3.54ರಷ್ಟು ಗರಿಷ್ಠ ಇಳಿಕೆ ಕಂಡಿತು.

ಏಷ್ಯಾದಲ್ಲಿ, ಶಾಂಘೈ, ಟೋಕಿಯೊ, ಸೋಲ್‌ ಮತ್ತು ಹಾಂಗ್‌ಕಾಂಗ್‌ ಷೇರುಪೇಟೆಗಳ ವಹಿವಾಟು ಇಳಿಕೆ ಕಂಡಿತು. ಯುರೋಪ್‌ನ ಮಾರುಕಟ್ಟೆಗಳು ನಕಾರಾತ್ಮಕ ವಹಿವಾಟು ನಡೆಸಿದವು. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್‌ ಕಚ್ಚಾ ತೈಲ ದರ ಶೇ 0.06ರಷ್ಟು ಇಳಿಕೆ ಕಂಡು ಒಂದು ಬ್ಯಾರಲ್‌ಗೆ 92.59 ಬ್ಯಾರಲ್‌ಗೆ ತಲುಪಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.