ಮುಂಬೈ: ವಿದೇಶಿ ಬಂಡವಾಳದ ನಿರಂತರ ಹೊರಹರಿವು ಮತ್ತು ಅಮೆರಿಕದ ಸುಂಕ ನೀತಿಯಿಂದಾಗಿ ದೇಶದ ಷೇರುಪೇಟೆ ಸೂಚ್ಯಂಕಗಳು ಶುಕ್ರವಾರದ ವಹಿವಾಟಿನಲ್ಲಿ ಇಳಿಕೆ ಕಂಡಿವೆ.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 765 ಅಂಶ ಇಳಿಕೆಯಾಗಿ, 79,857ಕ್ಕೆ ವಹಿವಾಟು ಅಂತ್ಯಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 232 ಅಂಶ ಕಡಿಮೆಯಾಗಿ, 24,363ಕ್ಕೆ ಕೊನೆಗೊಂಡಿದೆ.
ಭಾರ್ತಿ ಏರ್‌ಟೆಲ್, ಟಾಟಾ ಮೋಟರ್ಸ್, ಮಹೀಂದ್ರ ಆ್ಯಂಡ್ ಮಹೀಂದ್ರ, ಕೋಟಕ್ ಮಹೀಂದ್ರ ಬ್ಯಾಂಕ್, ಎಕ್ಸಿಸ್ ಬ್ಯಾಂಕ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಷೇರಿನ ಮೌಲ್ಯದಲ್ಲಿ ಇಳಿಕೆಯಾಗಿದೆ. ಎನ್‌ಟಿಪಿಸಿ, ಟೈಟನ್, ಟ್ರೆಂಟ್, ಐಟಿಸಿ ಮತ್ತು ಬಜಾಜ್ ಫಿನ್‌ಸರ್ವ್ ಷೇರಿನ ಮೌಲ್ಯದಲ್ಲಿ ಏರಿಕೆಯಾಗಿದೆ.
ವಿದೇಶಿ ಸಾಂಸ್ಥಿಕ ಹೂಡಿಕೆದಾರರು (ಎಫ್‌ಐಐ) ಗುರುವಾರದ ವಹಿವಾಟಿನಲ್ಲಿ ₹4,997 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಇದೇ ವೇಳೆ ದೇಶೀಯ ಸಾಂಸ್ಥಿಕ ಹೂಡಿಕೆದಾರರು ₹10,864 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.