
ಪಿಟಿಐ
ಮುಂಬೈ: ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು, ವಾಹನ ವಲಯದ ಕಂಪನಿಗಳ ಷೇರುಗಳ ಖರೀದಿ ಹೆಚ್ಚಳದಿಂದ ದೇಶದ ಷೇರುಪೇಟೆ ಸೂಚ್ಯಂಕಗಳು ಸೋಮವಾರದ ವಹಿವಾಟಿನಲ್ಲಿ ಏರಿಕೆ ಕಂಡಿವೆ.
ಮುಂಬೈ ಷೇರುಪೇಟೆ ಸೂಚ್ಯಂಕ ಸೆನ್ಸೆಕ್ಸ್ 479 ಅಂಶ ಹೆಚ್ಚಳವಾಗಿ, 83,294ಕ್ಕೆ ವಹಿವಾಟು ಕೊನೆಗೊಂಡಿದೆ. ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ ನಿಫ್ಟಿ 141 ಅಂಶ ಏರಿಕೆಯಾಗಿ, 25,713ಕ್ಕೆ ಅಂತ್ಯಗೊಂಡಿದೆ.
‘ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವಿದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಪ್ರತಿಸುಂಕವನ್ನು ಅಲ್ಲಿನ ಸುಪ್ರೀಂ ಕೋರ್ಟ್ ಅನೂರ್ಜಿತಗೊಳಿಸಿದೆ. ಇದು ದೇಶದ ಷೇರುಪೇಟೆ ಸೂಚ್ಯಂಕಗಳ ಏರಿಕೆಗೆ ಕಾರಣವಾಯಿತು’ ಎಂದು ಜಿಯೋಜಿತ್ ಇನ್ವೆಸ್ಟ್‌ಮೆಂಟ್‌ನ ಸಂಶೋಧನಾ ವಿಭಾಗದ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.