ADVERTISEMENT

ಷೇರುಪೇಟೆಯಲ್ಲಿ ನಕಾರಾತ್ಮಕ ಚಲನೆ

ಪಿಟಿಐ
Published 23 ಜುಲೈ 2019, 19:39 IST
Last Updated 23 ಜುಲೈ 2019, 19:39 IST
   

ಮುಂಬೈ: ದೇಶದ ಷೇರುಪೇಟೆಗಳ ಮೇಲೆ ಕೇಂದ್ರ ಬಜೆಟ್‌ ಮೂಡಿಸಿರುವ ಆತಂಕ ಇನ್ನೂ ಕಡಿಮೆಯಾಗಿಲ್ಲ.ಸತತ ನಾಲ್ಕನೇ ವಹಿವಾಟು ಅವಧಿಯಲ್ಲಿಯೂ ನಕಾರಾತ್ಮಕ ವಹಿವಾಟು ನಡೆಯಿತು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ (ಬಿಎಸ್‌ಇ) 48 ಅಂಶ ಇಳಿಕೆ ಕಂಡು 37,983 ಅಂಶಗಳಲ್ಲಿ ವಹಿವಾಟು ಅಂತ್ಯಗೊಂಡಿತು. ವಹಿವಾಟು ಮುಕ್ತಾಯವಾಗಲು ಒಂದು ಗಂಟೆ ಇರುವಾಗ ಅತಿಯಾದ ಮಾರಾಟದ ಒತ್ತಡ ಕಂಡುಬಂತು. ಇದರಿಂದ ಸೂಚ್ಯಂಕ ನಷ್ಟ ಕಾಣುವಂತಾಯಿತು.

ರಾಷ್ಟ್ರೀಯ ಷೇರುಪೇಟೆ ಸೂಚ್ಯಂಕ (ಎನ್‌ಎಸ್‌ಇ) ನಿಫ್ಟಿ 15 ಅಂಶ ಇಳಿಕೆ ಕಂಡು 11,331 ಅಂಶಗಳಿಗೆ ತಲುಪಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.