ADVERTISEMENT

ಲಾಭ ಗಳಿಕೆ ಮಾರಾಟ, ಸೂಚ್ಯಂಕ ಇಳಿಕೆ

ಪಿಟಿಐ
Published 27 ಏಪ್ರಿಲ್ 2022, 13:01 IST
Last Updated 27 ಏಪ್ರಿಲ್ 2022, 13:01 IST
   

ಮುಂಬೈ: ಬ್ಯಾಂಕಿಂಗ್, ಹಣಕಾಸು ಮತ್ತು ಐ.ಟಿ. ವಲಯದ ಷೇರುಗಳನ್ನು ಹೂಡಿಕೆದಾರರು ಲಾಭ ಗಳಿಕೆಯ ಉದ್ದೇಶದಿಂದ ಮಾರಾಟ ಮಾಡಿದ ಪರಿಣಾಮವಾಗಿ ದೇಶದ ಷೇರುಪೇಟೆ ಸೂಚ್ಯಂಕಗಳು ಬುಧವಾರ ಕುಸಿತ ಕಂಡವು.

ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್ 537 ಅಂಶ, ರಾಷ್ಟ್ರೀಯ ಷೇರುಪೇಟೆ ಸಂವೇದಿ ಸೂಚ್ಯಂಕ ನಿಫ್ಟಿ 162 ಅಂಶ ಕುಸಿದವು.

‘ಕೇಂದ್ರೀಯ ಬ್ಯಾಂಕ್‌ಗಳು ಬಡ್ಡಿ ದರ ಹೆಚ್ಚಿಸಿದರೆ ಜಾಗತಿಕ ಮಟ್ಟದಲ್ಲಿ ಆರ್ಥಿಕ ಬೆಳವಣಿಗೆಯು ಮಂದಗತಿಗೆ ತಿರುಗಬಹುದೇ ಎಂಬ ಆಲೋಚನೆಯಲ್ಲಿ ಹೂಡಿಕೆದಾರರು ಇದ್ದಾರೆ. ಚೀನಾದಲ್ಲಿನ ಲಾಕ್‌ಡೌನ್ ಹಾಗೂ ರಷ್ಯಾ–ಉಕ್ರೇನ್ ಯುದ್ಧ ಕೂಡ ಮಂದಗತಿಯ ಬೆಳವಣಿಗೆಗೆ ದಾರಿ ಮಾಡಿಕೊಡುವುದೇ ಎಂಬ ಚಿಂತೆಯೂ ಅವರಲ್ಲಿದೆ. ಇದರಿಂದಾಗಿ ಹೂಡಿಕೆದಾರರ ಹಣವು ಷೇರು ಮಾರುಕಟ್ಟೆಗಳಿಂದ ಸುರಕ್ಷಿತ ಹೂಡಿಕೆಗಳ ಕಡೆ ಹರಿದುಹೋಗುತ್ತಿದೆ’ ಎಂದು ಜಿಯೋಜಿತ್‌ ಫೈನಾನ್ಶಿಯಲ್‌ ಸರ್ವಿಸಸ್‌ನ ಸಂಶೋಧನಾ ಮುಖ್ಯಸ್ಥ ವಿನೋದ್ ನಾಯರ್ ಹೇಳಿದ್ದಾರೆ.

ADVERTISEMENT

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ರೆಂಟ್ ಕಚ್ಚಾ ತೈಲದ ಬೆಲೆಯು ಶೇ 0.89ರಷ್ಟು ಹೆಚ್ಚಾಗಿ, ಪ್ರತಿ ಬ್ಯಾರೆಲ್‌ಗೆ 105.81 ಡಾಲರ್‌ಗೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.